For the best experience, open
https://m.newskannada.com
on your mobile browser.
Advertisement

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.
09:51 AM May 20, 2024 IST | Ashitha S
ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಬೆಂಗಳೂರು: ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಇಂದಿನಿಂದ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.

Advertisement

ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು.

Advertisement

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʼನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

https://x.com/i/status/1792406999508107271

Advertisement
Tags :
Advertisement