For the best experience, open
https://m.newskannada.com
on your mobile browser.
Advertisement

ಮೈತ್ರಿ ಬಲಪಡಿಸಬೇಕು ಎಂದ ನಿಖಿಲ್ ಕುಮಾರಸ್ವಾಮಿ

ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ.ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು  ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ  ನಿರಾಕರಿಸಿದ್ದಾರೆ.
12:29 PM Feb 11, 2024 IST | Ashika S
ಮೈತ್ರಿ ಬಲಪಡಿಸಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ.ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು  ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ  ನಿರಾಕರಿಸಿದ್ದಾರೆ.

Advertisement

ಜೆಡಿಎಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಈಗ ನಾನು ಮಂಡ್ಯ ಆಕಾಂಕ್ಷಿ ಅಲ್ಲ. 2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ. ಕಳೆದ ನಾಲ್ಕು ದಿನಗಳಿಂದಲೂ ನಾನು ಗಮನಿಸುತ್ತಿದ್ದೇನೆ. ನಾನು ಯೂ ಟರ್ನ್ ಹೊಡೆಯಲ್ಲ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ನಾನು ಮಂಡ್ಯ ಆಕಾಂಕ್ಷಿ ಅಲ್ಲ ಎಂದರು.

ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆದರು. ಈ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ. ಮೈತ್ರಿ ಬಲಪಡಿಸಬೇಕು. ಮತ್ತೆ ಮೋದಿಯವರು ಪ್ರಧಾನಿ ಆಗಬೇಕು. ನನ್ನ ಗಮನ 28 ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ಹೇಳಿದರು.

Advertisement

Advertisement
Tags :
Advertisement