For the best experience, open
https://m.newskannada.com
on your mobile browser.
Advertisement

ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಕ್ರಿಕೆಟಿಗ ಅಂಬಾಟಿ ರಾಯುಡು

ಕ್ರಿಕೆಟಿಗ ಅಂಬಾಟಿ ರಾಯುಡು ಇತ್ತೀಚೆಗಷ್ಟೇ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದೀಗ ಒಂದೇ ವಾರಕ್ಕೆ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. 
01:57 PM Jan 06, 2024 IST | Gayathri SG
ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಕ್ರಿಕೆಟಿಗ ಅಂಬಾಟಿ ರಾಯುಡು

ಹೈದರಾಬಾದ್: ಕ್ರಿಕೆಟಿಗ ಅಂಬಾಟಿ ರಾಯುಡು ಇತ್ತೀಚೆಗಷ್ಟೇ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದೀಗ ಒಂದೇ ವಾರಕ್ಕೆ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

Advertisement

ಕಳೆದ ಡಿಸೆಂಬರ್ 28ರಂದು ಆಂಧ್ರ ಪ್ರದೇಶದ ಆಡಳಿತಾ ರೂಢ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದ ಕ್ರಿಕೆಟಿಗ ಅಂಬಾಟಿ ರಾಯುಡು ಪಕ್ಷ ಸೇರಿದ ಒಂದೇ ವಾರಕ್ಕೆ ಪಕ್ಷ ತೊರೆದಿದ್ದಾರೆ. ಕೇವಲ ವಾರದ ಹಿಂದೆಯಷ್ಟೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅಂಬಾಟಿ ರಾಯುಡು YSRC ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ಅಂಬಾಟಿ ರಾಯುಡು ಹೇಳಿದ್ದಾರೆ.

ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು, ಎಲ್ಲರಿಗೂ ಧನ್ಯವಾದಗಳು ಎಂದು ಅಂಬಾಟಿ ರಾಯುಡು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Advertisement

Advertisement
Tags :
Advertisement