For the best experience, open
https://m.newskannada.com
on your mobile browser.
Advertisement

ಸರ್ಕಾರಿ ಶಾಲೆಗಳಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
12:12 PM Apr 10, 2024 IST | Chaitra Kulal
ಸರ್ಕಾರಿ ಶಾಲೆಗಳಲ್ಲಿ ಏ 14 ರಂದು ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಏಪ್ರಿಲ್ 10 ರಂದು ಮುಕ್ತಾಯವಾಗುತ್ತದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ.

ಈ ವಿಷಯದ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

Advertisement
Tags :
Advertisement