ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಬುಲೆನ್ಸ್‌ನ ನಿಯಂತ್ರಣ ತಪ್ಪಿ ಸರಣಿ ಅಪಘಾತ: ಚಾಲಕ ಪೊಲೀಸರ ವಶಕ್ಕೆ

ಅಂಬುಲೆನ್ಸ್‌ ಚಾಲಕನಿಗೆ ನಿಯಂತ್ರಣ ಸಿಗದೆ ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.
04:43 PM Apr 27, 2024 IST | Chaitra Kulal

ಬೆಂಗಳೂರು: ಅಂಬುಲೆನ್ಸ್‌ ಚಾಲಕನಿಗೆ ನಿಯಂತ್ರಣ ಸಿಗದೆ ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

Advertisement

ಶುಕ್ರವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು, ಅಂಬುಲೆನ್ಸ್ ಚಾಲಕ ಸುಮಂತ್ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ಸಿಗದೆ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಸುಮಂತ್‌ನನ್ನು ಬಂಧಿಸಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Advertisement
Tags :
AMBULANCEBANGALORELatestNewsNewsKarnatakaPOLICESerial AccidentSURRENDER
Advertisement
Next Article