For the best experience, open
https://m.newskannada.com
on your mobile browser.
Advertisement

ನಟ ಅಮಿತಾಭ್​ ಬಚ್ಚನ್​ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ, ಆ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಬಾಲಿವುಡ್ ನಟ ಅಮಿತಾಭ್​ ಬಚ್ಚನ್ ಅವರಿಗೆ ಪ್ರತಿಷ್ಠಿತ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುತ್ತಿದೆ. ಮಂಗೇಶ್ಕರ್ ಕುಟುಂಬವು ಈ ಪ್ರಶಸ್ತಿಯನ್ನು ನೀಡುತ್ತಿದೆ.
04:39 PM Apr 18, 2024 IST | Ashitha S
ನಟ ಅಮಿತಾಭ್​ ಬಚ್ಚನ್​ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ಮುಂಬೈ: ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ, ಆ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಬಾಲಿವುಡ್ ನಟ ಅಮಿತಾಭ್​ ಬಚ್ಚನ್ ಅವರಿಗೆ ಪ್ರತಿಷ್ಠಿತ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುತ್ತಿದೆ. ಮಂಗೇಶ್ಕರ್ ಕುಟುಂಬವು ಈ ಪ್ರಶಸ್ತಿಯನ್ನು ನೀಡುತ್ತಿದೆ.

Advertisement

ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್ ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ಮೂಲಕ ಪ್ರಶಸ್ತಿ ಘೋಷಣೆ ಮಾಡಲಾಯಿತು. ಈ ಮೊದಲು ಇದೇ ಪ್ರಶಸ್ತಿ ಪಡೆದ ನರೇಂದ್ರ ಮೋದಿ ಹಾಗೂ ಗಾಯಕಿ ಆಶಾ ಭೋಂಸ್ಲೆ ಅವರ ಸಾಲಿಗೆ ಈಗ ಅಮಿತಾಭ್​ ಬಚ್ಚನ್​ ಸೇರ್ಪಡೆ ಆಗುತ್ತಿದ್ದಾರೆ.

‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತೆ, ದಿವಂಗತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ‘ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ’ ನೀಡುತ್ತಿರುವ ಈ ಪ್ರಶಸ್ತಿಯು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗುರುತಿಸುತ್ತದೆ. ಅಮಿತಾಬ್​ ಬಚ್ಚನ್ ಅವರ ಜೊತೆಗೆ, ಅತ್ಯುತ್ತಮ ಸಾಧನೆ ಮಾಡಿದ ಹಲವಾರು ದಿಗ್ಗಜರಿಗೆ ಈ ಪ್ರಶಸ್ತಿ ಸಿಗುತ್ತಿದೆ.

Advertisement

Advertisement
Tags :
Advertisement