ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆ: ಹಲವು ಮಂದಿ ಅಸ್ವಸ್ಥ

ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ. 
11:01 AM Dec 27, 2023 IST | Ashika S

ತಮಿಳುನಾಡು:  ಕಾರ್ಖಾನೆಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಗೊಂಡು, ಹಲವು ಮಂದಿ ಅಸ್ವಸ್ಥಗೊಂಡ ಘಟನೆ ತಮಿಳುನಾಡಿನ ರಸಗೊಬ್ಬರ ತಯಾರಿಕಾ ಕೇಂದ್ರವಾದ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಎನ್ನೋರ್‌ನಲ್ಲಿ ನಡೆದಿದೆ.

Advertisement

ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್‌ಲೈನ್‌ನಲ್ಲಿ ತಂಪಾಗಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಅನಿಲ ಸೋರಿಕೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟ ಸಮಸ್ಯೆ ಎದುರಾಗಿ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ವರದಿಗಳು ತಿಳಿಸಿವೆ.

Advertisement

ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಸ್ಥಳೀಯ ನಿವಾಸಿಗಳು ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚುವಂತೆ ಮತ್ತು ಮಾಸ್ಕ್ ಧರಿಸಿ ಮತ್ತು ನೀರಿನಲ್ಲಿ ಅದ್ದಿದ ಕರವಸ್ತ್ರಗಳೊಂದಿಗೆ ಮನೆಗಳಿಂದ ಹೊರ ಬರುವಂತೆ ಮನವಿ ಮಾಡಲಾಗಿದೆ.

ಸ್ಥಳದಲ್ಲಿ ಇದೀಗ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿ.ವಿಜಯಕುಮಾರ್ ಅವರು ತಿಳಿಸಿದ್ದಾರೆ.

Advertisement
Tags :
LatetsNewsNewsKannadaಅನಿಲಅಮೋನಿಯಾಅಸ್ವಸ್ಥಕಾರ್ಖಾನೆಸೋರಿಕೆ
Advertisement
Next Article