For the best experience, open
https://m.newskannada.com
on your mobile browser.
Advertisement

ಅನಂತ್ ಅಂಬಾನಿ ಧರಿಸಿದ್ದ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್ಬರ್ಗ್ ಪತ್ನಿ

ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭದಲ್ಲಿ ದೇಶ, ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಅದ್ದೂರಿಯಾಗಿ ನಡೆಯುತ್ತಿರುವ ಈ ವಿವಾಹ ಪೂರ್ವ ಕಾರ್ಯಕ್ರಮಗಳು ಅಂಬಾನಿ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದೆ.
01:35 PM Mar 04, 2024 IST | Ashitha S
ಅನಂತ್ ಅಂಬಾನಿ ಧರಿಸಿದ್ದ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್ಬರ್ಗ್ ಪತ್ನಿ

ಜಾಮ್‌ ನಗರ: ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭದಲ್ಲಿ ದೇಶ, ವಿದೇಶದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಅದ್ದೂರಿಯಾಗಿ ನಡೆಯುತ್ತಿರುವ ಈ ವಿವಾಹ ಪೂರ್ವ ಕಾರ್ಯಕ್ರಮಗಳು ಅಂಬಾನಿ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದೆ.

Advertisement

ಅನಂತ್ ಪ್ರೀವೆಂಡಿಂಗ್ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ಕೋಟ್ಯಾಧಿಪತಿಗಳು ಸೇರಿದಂತೆ ಸಾಕಷ್ಟು ಮಂದಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾದ ಫೇಸ್‌ಬುಕ್ ಸಹ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ ಪತ್ನಿ ಅನಂತ್ ಧರಿಸಿದ್ದ ವಾಚ್ ನೋಡಿ ದಿಗ್ಬ್ರಮೆಗೊಂಡಿದ್ದಾರೆ.

ಮಾರ್ಕ್ ಜುಕರ್ ಬರ್ಗ ತಮ್ಮ ಪತ್ನಿ ಪ್ರಿಸ್ಸಿಲ್ಲಾ ಚಾನ್ ಜೊತೆ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿ ಆದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಜುಕರ್‌ಬರ್ಗ್ ಪತ್ನಿ ಪ್ರಿಸ್ಸಿಲ್ಲಾ ಚಾನ್ ಅವರು ಅನಂತ್ ಅಂಬಾನಿ ಅವರ ಕೈಯಲ್ಲಿರುವ ದುಬಾರಿ ವಾಚ್‌ನಿಂದ ದಿಗ್ಭ್ರಮೆಗೊಂಡಿದ್ದಾರೆ.

Advertisement

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಅನಂತ್ ಅವರು ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಅವರೊಂದಿಗೆ ನಿಂತು ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ ಪ್ರಿಸ್ಸಿಲ್ಲಾರ ಕಣ್ಣು ಅನಂತ್ ಅವರ ದುಬಾರಿ ವಾಚ್​​ನತ್ತ ಹೋಗಿದೆ. ಅವರಿಗೆ ಆ ವಾಚ್ ತುಂಬಾ ಇಷ್ಟ ಆಗುತ್ತದೆ. ಅನಂತ್ ಅವರ ಕೈಯಲ್ಲಿರುವ ವಾಚ್​ನ ಮೆಚ್ಚುತ್ತಾ, 'ಇದು ತುಂಬಾ ಅದ್ಭುತವಾದ ವಾಚ್. ಈ ವಾಚ್​​ನ ಯಾವ ಕಂಪನಿ ತಯಾರಿಸಿದೆ?' ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅನಂತ್, ರಿಶಾರ್​ ಮಿಲ್ ಕಂಪನಿಯ ವಾಚ್ ಎಂದಿದ್ದಾರೆ.

ಅನಂತ್ ಕೈಯಲ್ಲಿದ್ದ ವಾಚ್ ನೋಡಿ ಜುಕರ್​​ಬರ್ಗ್ ಮನಸ್ಸು ಬದಲಾಗಿದೆ. 'ನಾನು ಎಂದಿಗೂ ವಾಚ್​​ಗಳನ್ನು ಖರೀದಿಸಲು ಬಯಸಲಿಲ್ಲ. ಆದರೆ ಅನಂತ್‌ ಅವರ ಕೈಯಲ್ಲಿದ್ದ ವಾಚ್ ನೋಡಿ ನನ್ನ ಮನಸ್ಸು ಬದಲಾಯಿತು. ವಾಚ್ ಚೆನ್ನಾಗಿ ಕಾಣುತ್ತದೆ' ಎಂದಿದ್ದಾರೆ ಮಾರ್ಕ್​ ಜುಕರ್​ಬರ್ಗ್. ಈ ವೀಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement
Tags :
Advertisement