ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂವಿಧಾನ ವಿರೋಧಿ‌ ಬಿಜೆಪಿಯನ್ನು ಈ ಬಾರಿ ಸೋಲಿಸಬೇಕಿದೆ : ಮಂಜುನಾಥ್ ಗಿಳಿಯಾರು

ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿರುವ ಬಿಜೆಪಿ, ಈ ದೇಶದ ಮೀಸಲಾತಿ ವ್ಯವಸ್ಥೆಯನ್ನು ಬುಡ ಮೇಲುಗೊಳಿಸಿದೆ ಎಂದು ಸಮಾನ ಮನಸ್ಥ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಉಡುಪಿ ಜಿಲ್ಲಾ ಸಂಚಾಲಕ ಮಂಜುನಾಥ್ ಗಿಳಿಯಾರು ಹೇಳಿದ್ದಾರೆ.
05:09 PM Apr 23, 2024 IST | Chaitra Kulal

ಉಡುಪಿ: ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿರುವ ಬಿಜೆಪಿ, ಈ ದೇಶದ ಮೀಸಲಾತಿ ವ್ಯವಸ್ಥೆಯನ್ನು ಬುಡ ಮೇಲುಗೊಳಿಸಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿ, ಗುಪ್ತ ಕಾರ್ಯಸೂಚಿಯನ್ನು ಹೊಂದಿರುವ ಬಿಜೆಪಿಯನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕಾಗಿದೆ. ಈ ಚುನಾವಣೆ ದಲಿತರು, ಶೋಷಿತ ಸಮುದಾಯ, ಬಡವರ ಹಾಗೂ ಮಹಿಳೆಯರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ಸಮಾನ ಮನಸ್ಥ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ಉಡುಪಿ ಜಿಲ್ಲಾ ಸಂಚಾಲಕ ಮಂಜುನಾಥ್ ಗಿಳಿಯಾರು ಹೇಳಿದ್ದಾರೆ.

Advertisement

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಮಹಾ ಒಕ್ಕೂಟದ ವತಿಯಿಂದ ಮನೆ ಮನಗಳಲ್ಲಿ ಅಂಬೇಡ್ಕರ್ ಅಭಿಯಾನವನ್ನು ಏ.21ರಿಂದ ಆರಂಭಿಸಲಾಗಿದೆ. ಅದರಂತೆ ದಲಿತರ ಕಾಲನಿಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿದರೆ ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಅಪಾಯ ಒದಗುವುದು ಶತಸಿದ್ಧ. ಆದ್ದರಿಂದ ಪ್ರಜ್ಞಾವಂತ ಮತದಾರರು ಈ ಬಾರಿ ಸಂವಿಧಾನ ವಿರೋಧಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಬಾರದು ಎಂದು ಅವರು ಮನವಿ ಮಾಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಹಾ ಒಕ್ಕೂಟದ ಪ್ರಮುಖರಾದ ವಾಸುದೇವ ಮುದೂರು, ಅಣ್ಣಪ್ಪ ನಕ್ರೆ ಕಾರ್ಕಳ, ವಿಶ್ವನಾಥ ಬೆಳ್ಳಂಪಳ್ಳಿ, ಶ್ಯಾಂ ಸುಂದರ್ ತೆಕ್ಕಟ್ಟೆ, ರಾಜು ಬೆಟ್ಟಿನಮನೆ, ಕುಮಾರ್ ಕೋಟ, ಸುರೇಶ್ ಹಕ್ಲಾಡಿ, ಶಿವಾನಂದ ಮೂಡಬೆಟ್ಟು, ಮೋಹನ್, ಚಂದ್ರಶೇಖರ್ ಉಡುಪಿ, ಕೀರ್ತಿ ಕುಮಾರ್, ಸಾವಿತ್ರಿ ಕಾರ್ಕಳ, ಸುಮಿತ್ರಾ ಕಾರ್ಕಳ ಉಪಸ್ಥಿತರಿದ್ದರು.

Advertisement
Tags :
ConstitutionLatestNewsManjunath GiliyarNewsKarnatakaಉಡುಪಿಬಿಜೆಪಿ
Advertisement
Next Article