For the best experience, open
https://m.newskannada.com
on your mobile browser.
Advertisement

ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಸೇವೆ ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದೆ.
10:41 PM Jul 08, 2024 IST | Chaitra Kulal
ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದೆ.

Advertisement

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ ವಯೋಮಾನವದವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

Advertisement

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
Advertisement