For the best experience, open
https://m.newskannada.com
on your mobile browser.
Advertisement

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ಧರ್ಮಗುರುವಾಗಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ನೇಮಕಗೊಳಿಸಿದ್ದಾರೆ.
06:05 PM Jul 09, 2024 IST | Chaitra Kulal
ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ಧರ್ಮಗುರುವಾಗಿ ಫರ್ಡಿನಾಂಡ್ ಗೊನ್ಸಾಲ್ವಿಸ್ ನೇಮಕ

ಉಡುಪಿ: ವಲೇರಿಯನ್ ಮೆಂಡೊನ್ಸಾ ಅವರ ನಿಧನದಿಂದ ತೆರವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ಹಾಗೂ ಧರ್ಮಗುರುಗಳಾಗಿ ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ನೇಮಕಗೊಳಿಸಿದ್ದಾರೆ.

Advertisement

ಅವರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುವಿನ ಹುದ್ದೆಯೊಂದಿಗೆ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್, ಧರ್ಮಗುರು ಹಾಗೂ ಕಲ್ಯಾಣಪುರ ವಲಯದ ಪ್ರಧಾನ ಧರ್ಮಗುರುಗಳಾಗಿ ಹೆಚ್ಚುವರಿ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

ಇವರ ಅಧಿಕಾರ ಸ್ವೀಕಾರ ಸಮಾರಂಭವು ಜುಲೈ 13 ರಂದು ಶನಿವಾರ ಮಧ್ಯಾಹ್ನ 3.30 ಕ್ಕೆ ಕ್ಯಾಥೆಡ್ರಲ್ ನಲ್ಲಿ ಧರ್ಮಪ್ರಾಂತ್ಯದ ಕುಲಪತಿಗಳಾದ ಡಾ. ರೋಶನ್ ಡಿಸೋಜಾ ಅವರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
Advertisement