ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅರ್ಜೆಂಟೀನಾದಲ್ಲಿ 5.6 ತೀವ್ರತೆಯ ಪ್ರಬಲ ಭೂಕಂಪ

ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.
02:40 PM Jan 03, 2024 IST | Ashitha S

ಅರ್ಜೆಂಟೀನಾ: ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.

Advertisement

ಇನ್ನು 2024ರ ಜ.1 ರಂದೇ ಜಪಾನ್‌ ದೇಶ ಪ್ರಬಲ ಭೂಕಂಪಕ್ಕೆ ಸಾಕ್ಷಿಯಾಗಿದೆ. ಜಪಾನ್‌ ದೇಶದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ ಸುನಾಮಿ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ. ಈ ಸಂಬಂಧ ಜಪಾನ್‌ನ ಭೂಗರ್ಭ ಇಲಾಖೆ ಅಧಿಕೃತ ಮಾಹಿತಿ ನೀಡಿದ್ದು, ಇಶಿಕಾವಾ ಎಂಬಲ್ಲಿ ಭೂಕಂಪ ಕಂದ್ರ ಇದೆ ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ 7.4ರಷ್ಟು ತೀವ್ರತೆಯ ಭೂಕಂಪ ಎಂದು ಹೇಳಲಾಗಿತ್ತು. ನಂತರ 7.6ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಸ್ಪಷ್ಟನೆ ಹೊರಬಿತ್ತು. ಭೂಕಂಪಕ್ಕೆ ಇದುವರೆಗೂ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಭೂಕಂಪನದಿಂದ 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. 31,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

Advertisement

ಇತ್ತ ಇಂದು ಭಾರತದ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ರಾತ್ರಿ 10:55 ರ ಸುಮಾರಿಗೆ 3.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಉದ್ದ 89.82 ಕಿಮೀ, 5 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ತಿಳಿದುಬಂದಿದೆ.

Advertisement
Tags :
indiaLatestNewsNewsKannadaನವದೆಹಲಿಪ್ರಬಲ ಭೂಕಂಪ
Advertisement
Next Article