For the best experience, open
https://m.newskannada.com
on your mobile browser.
Advertisement

ಕರಾವಳಿಯಲ್ಲಿ ಮತ್ತೆ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ

ಕರಾವಳಿ ಭಾಗದಲ್ಲಿ ನಕ್ಸಲರ ಚಲನವಲನ ಕಂಡು ಬರುತ್ತಿದೆ. ಇದು ಸಹಜವಾಗಿ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. 
12:39 PM Apr 06, 2024 IST | Ashika S
ಕರಾವಳಿಯಲ್ಲಿ ಮತ್ತೆ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ

ಮಂಗಳೂರು: ಕರಾವಳಿ ಭಾಗದಲ್ಲಿ ನಕ್ಸಲರ ಚಲನವಲನ ಕಂಡು ಬರುತ್ತಿದೆ. ಇದು ಸಹಜವಾಗಿ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ.

Advertisement

ರಾತ್ರಿ 7 ಕ್ಕೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಆರು ಮಂದಿ ಶಸ್ತ್ರಸಜ್ಜಿತ ನಕ್ಸಲರ ಬಂದಿದ್ದಾರೆ.

ಮನೆಗೆ ಬಂದು ಊಟ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಅಷ್ಟು ಮಾತ್ರವಲ್ಲದೆ, ನಕ್ಸಲರು ಮನೆಯಿಂದ ಅಕ್ಕಿ ತೆಗೆದುಕೊಂಡು ಹೋದಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕೆಲ ದಿನಗಳ ಇಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರ ತಂಡ ಭೇಟಿ ನೀಡಿತ್ತು. ಇದೀಗ ಬಿಳಿನೆಲೆ ನಕ್ಸಲರ ತಂಡ ಕಾಣಿಸಿಕೊಂಡಿದೆ. ಸದ್ಯ ದಕ್ಷಿಣ ಕನ್ನಡದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.

ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ , ಮುಂಡಗಾರು ಲತಾ‌ ತಂಡ ಪ್ರತ್ಯಕ್ಷವಾದ ಶಂಕೆ ವ್ಯಕ್ತವಾಗಿದೆ. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ದಳ (ANF) ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದೆ.

Advertisement
Tags :
Advertisement