ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಗ್ರರೊಂದಿಗೆ ಹೋರಾಟದಲ್ಲಿ ಸೇನಾಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಉಗ್ರರು ಮತ್ತು ಸೇನಾ ಪಡೆ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಅಧಿಕಾರಿ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.
06:20 PM Nov 22, 2023 IST | Ashika S

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಉಗ್ರರು ಮತ್ತು ಸೇನಾ ಪಡೆ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಅಧಿಕಾರಿ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.

Advertisement

ಅರಣ್ಯದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ವೇಳೆ ಎನ್‌ ಕೌಂಟರ್‌ ನಡೆದಿದ್ದು, ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ದಟ್ಟಾರಣ್ಯಗಳನ್ನು ಭಯೋತ್ಪಾದಕರು ಅಡಗುತಾಣವಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಪ್ರದೇಶದ ಪರ್ವತಗಳು, ದಟ್ಟವಾದ ಕಾಡುಗಳಲ್ಲಿ ಅಡಗಿ ಸಂಚು ರೂಪಿಸುತ್ತಿದ್ದಾರೆ. ಕಳೆದ ವಾರ, ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಕೊಲ್ಲಲಾಗಿತ್ತು.

Advertisement

Advertisement
Tags :
LatestNewsNewsKannadaಅರಣ್ಯಉಗ್ರರುಎನ್‌ಕೌಂಟರ್‌ರಾಜೌರಿ ಜಿಲ್ಲೆಸೇನಾ ಪಡೆಹುತಾತ್ಮ
Advertisement
Next Article