ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

8 ವರ್ಷಗಳ ಕಾಲ ಕೋಮಾದಲ್ಲಿದ್ದ ಸೇನಾಧಿಕಾರಿ ನಿಧನ

ಉಗ್ರರಿಂದ ಗುಂಡೇಟು ತಿಂದು 8 ವರ್ಷಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸೇನಾಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯ ನಂತರ ಕೋಮಾದಲ್ಲಿದ್ದ ಹಿರಿಯ ಸೇನಾಧಿಕಾರಿ ಎಂಟು ವರ್ಷಗಳ ನಂತರ ಸಾವನ್ನಪ್ಪಿದ್ದಾರೆ.
12:02 PM Dec 26, 2023 IST | Ashitha S

ಕುಪ್ವಾರ: ಉಗ್ರರಿಂದ ಗುಂಡೇಟು ತಿಂದು 8 ವರ್ಷಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸೇನಾಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯ ನಂತರ ಕೋಮಾದಲ್ಲಿದ್ದ ಹಿರಿಯ ಸೇನಾಧಿಕಾರಿ ಎಂಟು ವರ್ಷಗಳ ನಂತರ ಸಾವನ್ನಪ್ಪಿದ್ದಾರೆ.

Advertisement

2015ರಲ್ಲಿ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರ ಜತೆಗಿನ ಎನ್‌ಕೌಂಟರ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಕರಣ್‌ಬೀರ್ ಸಿಂಗ್ ಗಾಯಗೊಂಡಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಂದಿನಿಂದ ಅವರು ಕೋಮಾದಲ್ಲಿದ್ದರು. ಅವರು ಶನಿವಾರ ಜಲಂಧರ್‌ನ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು.

ಸೇನಾ ಪದಕ ಪುರಸ್ಕೃತ ಲೆಫ್ಟಿನೆಂಟ್ ಕರ್ನಲ್ ಕರಣ್‌ಬೀರ್ ಸಿಂಗ್ ನಟ್ 2015 ರಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಗಂಭೀರವಾಗಿ ಗಾಯಗೊಂಡರು, ನಂತರ ಅವರು ಕೋಮಾಕ್ಕೆ ಹೋಗಿದ್ದರು. 8 ವರ್ಷಗಳ ಕಾಲ ಜೀವನ್ಮರಣ ಹೋರಾಟದ ನಂತರ ಇಹಲೋಕ ತ್ಯಜಿಸಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರುಸೇನಾಧಿಕಾರಿ
Advertisement
Next Article