ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಎನ್‌ಟಿಎ ಟ್ರಂಕ್‌ನಿಂದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಕದ್ದ ವ್ಯಕ್ತಿಗಳ ಬಂಧನ

ನೀಟ್ ಪ್ರಶ್ನೆ ಪತ್ರಿಕೆ ಕದ್ದ ಇಬ್ಬರನ್ನು ಕೇಂದ್ರ ತನಿಖಾ ದಳ ಮಂಗಳವಾರ ಬಂಧಿಸಿದೆ. ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟ್ರಂಕ್‌ನಿಂದ NEET-UG ಪೇಪರ್ ಅನ್ನು ಕದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
05:24 PM Jul 16, 2024 IST | Ashitha S

ದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಕದ್ದ ಇಬ್ಬರನ್ನು ಕೇಂದ್ರ ತನಿಖಾ ದಳ ಮಂಗಳವಾರ ಬಂಧಿಸಿದೆ. ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟ್ರಂಕ್‌ನಿಂದ NEET-UG ಪೇಪರ್ ಅನ್ನು ಕದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Advertisement

ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ವರದಿಯಾಗಿದೆ. ಪ್ರಶ್ನೆ ಪತ್ರಿಕೆಯನ್ನು ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಕೇಶ್ ರಂಜನ್ ಪ್ರಮುಖರು ಎಂದು ನಂಬಲಾಗಿದೆ. ರಂಜನ್ ನನ್ನು ಬಂಧಿಸಲು ಸಿಬಿಐ ಬಲೆ ಬೀಸಿ ಪಾಟ್ನಾ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿತು. ಪ್ರಸ್ತುತ ಪ್ರಕರಣದಲ್ಲಿ ತನಿಖಾ ಸಂಸ್ಥೆ ಇದುವರೆಗೆ ಹನ್ನೆರಡು ಜನರನ್ನು ಬಂಧಿಸಿದೆ.

Advertisement

Advertisement
Tags :
arrestedexamLATEST NEWSNEETUGNews KarnatakaPoliceTODAY
Advertisement
Next Article