For the best experience, open
https://m.newskannada.com
on your mobile browser.
Advertisement

ಆರ್ಟಿಕಲ್ 370 ರದ್ದು : ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ

ದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಸಂವಿಧಾನದ 370ನೇ ವಿಧಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಲಿದೆ. ಇದೀಗ ವಿಚಾರಣೆ ನೆರಪ್ರಸಾರ ಇಲ್ಲಿ ನೋಡಬಹುದು.
11:21 AM Dec 11, 2023 IST | Ashitha S
ಆರ್ಟಿಕಲ್ 370 ರದ್ದು   ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ

ದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಸಂವಿಧಾನದ 370ನೇ ವಿಧಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಲಿದೆ. ಇದೀಗ ವಿಚಾರಣೆ ನೆರಪ್ರಸಾರ ಇಲ್ಲಿ ನೋಡಬಹುದು.

Advertisement

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಪಂಚ ಸದಸ್ಯ ಪೀಠದಲ್ಲಿದ್ದಾರೆ.

Advertisement

ಇನ್ನು ಅರ್ಜಿದಾರರ ಪರವಾಗಿ  ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣಿಯಂ, ರಾಜೀವ್ ಧವನ್, ದುಷ್ಯಂತ್ ದವೆ, ಗೋಪಾಲ್ ಶಂಕರನಾರಾಯಣನ್ ಮತ್ತು ಜಾಫರ್ ಶಾ ಅರ್ಜಿದಾರರನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ ಮತ್ತು ವಿ ಗಿರಿಯಿಂದ ವಾದ ಮಂಡನೆ ಆಗಿದೆ.

Advertisement
Tags :
Advertisement