ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆರ್ಟಿಕಲ್ 370 ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಆಗಸ್ಟ್​ 5, 2019 ರಂದು ಪ್ರಧಾನಿ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದು ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ 'ಕೇಂದ್ರದ ಕ್ರಮ ಸಂವಿಧಾನಬದ್ಧವಾಗಿದೆ' ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
11:48 AM Dec 11, 2023 IST | Ashitha S

ದೆಹಲಿ: ಆಗಸ್ಟ್​ 5, 2019 ರಂದು ಪ್ರಧಾನಿ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದು ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ "ಕೇಂದ್ರದ ಕ್ರಮ ಸಂವಿಧಾನಬದ್ಧವಾಗಿದೆ" ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Advertisement

ಅಂದಿನ ರಾಜ್ಯ, ಇಂದಿನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿದ್ದ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಆರ್ಟಿಕಲ್ 370 ರದ್ದತಿ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಒಟ್ಟು 22 ಅರ್ಜಿಗಳು ಸಲ್ಲಿಕೆ ಆಗಿದ್ದವು.

ಇನ್ನು ಆರ್ಟಿಕಲ್ 370 ರದ್ದತಿ ನಿರ್ಧಾರವನ್ನು ಎತ್ತಿ ಹಿಡಿದಿರುವ ಪಂಚ ನ್ಯಾಯಾಧೀಶರ ನ್ಯಾಯಪೀಠ, ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಯದ ಹಿನ್ನೆಲೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದೆ. ಸೆಪ್ಟೆಂಬರ್ 2024ರೊಳಗೆ ಸೆಪ್ಟೆಂಬರ್ 2024ರೊಳಗೆ ಜಮ್ಮು & ಕಾಶ್ಮೀರಕ್ಕೆ ವಿಧಾನಸಭೆ ಚುನಾವಣೆ ನಡೆಸಿ ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ಸುಪ್ರೀಂ ಕೋರ್ಟ್​ ಸೂಚಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಪಂಚ ಸದಸ್ಯ ಪೀಠದಲ್ಲಿದ್ದಾರೆ.

 

Advertisement
Tags :
GOVERNMENTindiaKARNATAKALatestNewsNewsKannadaಆರ್ಟಿಕಲ್ 370ನವದೆಹಲಿಪ್ರಧಾನಿ ನರೇಂದ್ರ ಮೋದಿಸುಪ್ರೀಂ ಕೋರ್ಟ್
Advertisement
Next Article