ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಮ್ಮು, ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ತೀರ್ಪು: ಮುಫ್ತಿಗೆ ಗೃಹಬಂಧನ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿವಾದಾತ್ಮಕ ನಿರ್ಧಾರದ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ.
11:02 AM Dec 11, 2023 IST | Ashitha S

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿವಾದಾತ್ಮಕ ನಿರ್ಧಾರದ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಪಿಡಿಪಿಯ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ವರದಿಯಾಗಿದೆ.

Advertisement

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ. ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ 270ನೇ ವಿಧಿ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ 2019ರ ಆಗಸ್ಟ್​ 5 ರಂದು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸಂವಿಧಾನ ಪೀಠವು 16 ದಿನಗಳ ಕಾಲ ವಾದ, ಪ್ರತಿವಾದ ಆಲಿಸಿ ಸೆ.5 ರಂದು ತೀರ್ಪು ಕಾಯ್ದಿರಿಸಿತ್ತು.

2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರದ ಕ್ರಮಕ್ಕೆ ರಾಜ್ಯದ ಹಲವಾರು ಪ್ರಮುಖ ನಾಯಕರೊಂದಿಗೆ ಬಂಧಿತರಾಗಿದ್ದ 14 ತಿಂಗಳ ನಂತರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿಯನ್ನು ಬಿಡುಗಡೆ ಮಾಡಲಾಗಿತ್ತು.

Advertisement

2016 ರಲ್ಲಿ ಹಿಂದಿನ ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾದ ಮುಫ್ತಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮತ್ತು ಪರಿಣಾಮಕಾರಿಯಾಗಿ ವಿಭಜಿಸಲು ಕೇಂದ್ರವು ಮುಂದಾದಾಗ ಇತರ ಮಾಜಿ ಸಿಎಂಗಳಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಮತ್ತು ಇತರ ಪ್ರಾದೇಶಿಕ ನಾಯಕರೊಂದಿಗೆ ಬಂಧಿಸಲಾಯಿತು. ಆಗಸ್ಟ್ 5 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಲಾಗಿತ್ತು.

Advertisement
Tags :
GOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರುಮೆಹಬೂಬಾ ಮುಫ್ತಿ
Advertisement
Next Article