For the best experience, open
https://m.newskannada.com
on your mobile browser.
Advertisement

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ.
03:22 PM May 12, 2024 IST | Ashitha S
ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ.

Advertisement

'ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನಿಂದು 10 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇನೆ. ನನ್ನ ಬಂಧನದಿಂದಾಗಿ ಘೋಷಣೆ ಮಾಡುವುದು ವಿಳಂಬವಾಯಿತು. ಆದರೂ, ದೇಶದಲ್ಲಿ ಇನ್ನೂ ಹಲವು ಹಂತಗಳ ಮತದಾನ ಬಾಕಿ ಇದೆ. ಹಾಗಂತ, ಇಂಡಿಯಾ ಒಕ್ಕೂಟದ ಪಕ್ಷಗಳ ಜತೆ ಚರ್ಚಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಇದರಿಂದ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಭಾವಿಸಿದ್ದೇನೆ. ಇಂಡಿಯಾ ಒಕ್ಕೂಟವು ದೇಶದಲ್ಲಿ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು' ಎಂದು ಹೇಳಿದರು.

ಉಚಿತ ವಿದ್ಯುತ್‌, ಉಚಿತ ಆರೋಗ್ಯ ಸೇವೆ ಸೇರಿದಂತೆ ಹತ್ತು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಬಿಜೆಪಿ ಯಾವಾಗಲೂ ತನ್ನ ಭರವಸೆಗಳಲ್ಲಿ ವಿಫಲವಾಗಿದೆ. ನನ್ನ ಭರವಸೆಗಳು ದಾಖಲೆಯನ್ನು ಸಾಬೀತುಪಡಿಸಿವೆ. 'ಕೇಜ್ರಿವಾಲ್ ಕಿ ಗ್ಯಾರಂಟಿ' ಅಥವಾ 'ಮೋದಿ ಗ್ಯಾರಂಟಿ' ಯಾವುದು ಬೇಕು ಎಂದು ಜನತೆಗೆ ಕೇಜ್ರಿವಾಲ್‌ ಕೇಳಿದ್ದಾರೆ.

Advertisement

ಕೇಜ್ರಿವಾಲ್‌ ಘೋಷಿಸಿದ ಪ್ರಮುಖ ಗ್ಯಾರಂಟಿಗಳು

1. ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಸುವುದು. ಇದರಿಂದ ಬಡವರಿಗೆ, ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವುದು.
2. ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಿ, ಸೇನೆಯನ್ನು ಇನ್ನಷ್ಟು ಬಲಪಡಿಸುವುದು
3. ದೇಶಾದ್ಯಂತ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಿ, ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.
4. ಚೀನಾದ ಹಿಡಿತದಲ್ಲಿರುವ ಭಾರತದ ಜಾಗವನ್ನು ವಾಪಸ್‌ ಪಡೆಯುವುದು.
5. ಕೇಂದ್ರ ಹಾಗೂ ರಾಜ್ಯಗಳ ಸಹಕಾರದೊಂದಿಗೆ 5 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ಶಾಲೆ ನಿರ್ಮಿಸಿ, ಬಡವರಿಗೆ ಶಿಕ್ಷಣ ನೀಡುವುದು
6. ದೆಹಲಿಗೆ ರಾಜ್ಯ ಸ್ಥಾನಮಾನ ನೀಡುವ ಮೂಲಕ ಏಳಿಗೆಗೆ ಇನ್ನಷ್ಟು ಶ್ರಮಿಸುವುದು
7. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ನೀಡುವುದು
8. ನಿರುದ್ಯೋಗ
9. ಭ್ರಷ್ಟಾಚಾರವನ್ನು ಕೊನೆಗೊಳಿಸುವುದು
10. ಉದ್ಯಮಿಗಳಿಗಾಗಿ ಜಿಎಸ್‌ಟಿಯನ್ನು ಸರಳೀಕರಿಸಲಾಗುವುದು.

https://twitter.com/i/broadcasts/1LyGBnLwbepGN

Advertisement
Tags :
Advertisement