ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಐತಿಹಾಸಿಕ ಸಾಧನೆ

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 1 ವಿಕೆಟ್ ಪಡೆದಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್​ನ ಆರಂಭದಲ್ಲೇ 3 ವಿಕೆಟ್ ಕಬಳಿಸಿದ್ದಾರೆ. ಈ ಮೂರು ವಿಕೆಟ್​ಗಳೊಂದಿಗೆ ಇದೀಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
03:02 PM Feb 25, 2024 IST | Ashitha S

ರಾಂಚಿ: ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 1 ವಿಕೆಟ್ ಪಡೆದಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್​ನ ಆರಂಭದಲ್ಲೇ 3 ವಿಕೆಟ್ ಕಬಳಿಸಿದ್ದಾರೆ. ಈ ಮೂರು ವಿಕೆಟ್​ಗಳೊಂದಿಗೆ ಇದೀಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

Advertisement

ಅಂದರೆ ಭಾರತದಲ್ಲಿ ಆಡಲಾದ ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ವಿಕೆಟ್​ಗಳನ್ನು ಕಬಳಿಸಿದ ದಾಖಲೆ ಇದೀಗ‌ ಆರ್.ಅಶ್ವಿನ್ ಪಾಲಾಗಿದೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು.

ಭಾರತದಲ್ಲಿ 63 ಟೆಸ್ಟ್ ಪಂದ್ಯಗಳನ್ನಾಡಿದ್ದ ಅನಿಲ್ ಕುಂಬ್ಳೆ ಬರೋಬ್ಬರಿ 350 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ತವರಿನ ಪಿಚ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಕುಂಬ್ಳೆ ಬರೆದಿದ್ದರು.

Advertisement

ಆದರೆ ಇದೀಗ ರಾಂಚಿಯಲ್ಲಿ 4 ವಿಕೆಟ್ ಕಬಳಿಸುವುದರೊಂದಿಗೆ ಭಾರತದಲ್ಲಿ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ದಾಖಲೆ ಅಶ್ವಿನ್ ಪಾಲಾಗಿದೆ. ತವರಿನಲ್ಲಿ ಒಟ್ಟು 59 ಟೆಸ್ಟ್ ಪಂದ್ಯಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ ಇದುವರೆಗೆ 352* ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಈ ಮೂಲಕ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದು ರವಿಚಂದ್ರನ್ ಅಶ್ವಿನ್ ಭಾರತದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ 100 ಕ್ಕೂ ಅಧಿಕ ವಿಕೆಟ್ ಪಡೆದ ಭಾರತದ ಏಕೈಕ ಬೌಲರ್ ಎಂಬ ಹಿರಿಮೆಗೂ ಅಶ್ವಿನ್ ಪಾತ್ರರಾಗಿದ್ದಾರೆ.

ಇನ್ನು ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.  ರಾಂಚಿಯಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಎದುರಾಳಿ ವಿರುದ್ಧ 100 ವಿಕೆಟ್ ಮತ್ತು 1000 ರನ್ ಗಳಿಸಿದ ಮೊದಲ ಭಾರತೀಯ ಆಲ್‌ರೌಂಡರ್ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ.

 

 

Advertisement
Tags :
IndiancricketerLatestNewsNewsKannadaravichandran ashwin
Advertisement
Next Article