For the best experience, open
https://m.newskannada.com
on your mobile browser.
Advertisement

ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ : ಕಾಂಗ್ರೆಸ್​ ವಿರುದ್ಧ ಆರೋಪ

ಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ. ಚಿಂತಾಮಣಿ ತಾಲೂಕಿನ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
02:13 PM Apr 27, 2024 IST | Nisarga K
ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ   ಕಾಂಗ್ರೆಸ್​ ವಿರುದ್ಧ ಆರೋಪ
ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ : ಕಾಂಗ್ರೆಸ್​ ವಿರುದ್ಧ ಆರೋಪ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ. ಚಿಂತಾಮಣಿ ತಾಲೂಕಿನ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Advertisement

ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಬೆರಳುಗಳು ಕಟ್ ಆಗಿದ್ದು ತಲೆಗೆ ಗಂಭೀರವಾದ ಗಾಯವಾಗಿದೆ. ಸದ್ಯ ಗಾಯಾಳುವನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಈ ಸಂಬಂಧ ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಾದ ನರೇಂದ್ರ, ಮಂಜುನಾಥ, ಗಣೇಶ ಮತ್ತು ಮಹೇಶ್ ಎಂಬುವರಿಂದ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Advertisement
Tags :
Advertisement