For the best experience, open
https://m.newskannada.com
on your mobile browser.
Advertisement

ರಾಯಚೂರಿನಲ್ಲಿ ಮೂವರ ಮೇಲೆ ದಾಳಿ: ಮೂವರಿಗೆ ಗಂಭೀರ ಗಾಯ

ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು
03:24 PM Jul 07, 2024 IST | Nisarga K
ರಾಯಚೂರಿನಲ್ಲಿ ಮೂವರ ಮೇಲೆ ದಾಳಿ  ಮೂವರಿಗೆ ಗಂಭೀರ ಗಾಯ
ರಾಯಚೂರಿನಲ್ಲಿ ಮೂವರ ಮೇಲೆ ದಾಳಿ: ಮೂವರಿಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು. ಇನ್ನು ಚಿರತೆ ಪ್ರತ್ಯಕ್ಷವಾದ ಬಗ್ಗೆ ರಮೇಶ್ ಮತ್ತು ಮಲ್ಲಣ್ಣನಿಗೆ ರಂಗನಾಥ್ ಮಾಹಿತಿ ನೀಡಿದ್ದು ಮೂವರು ಸೇರಿ ಆಯುಧ ತೆಗೆದುಕೊಂಡು ಚಿರತೆಗೆ ಬೆದರಿಸಲು ಯತ್ನಿಸಿದ್ದಾರೆ. ಈ ವೇಳೆ ರಂಗನಾಥ್, ಮಲ್ಲಣ್ಣ ಹಾಗೂ ರಮೇಶ್ ಮೇಲೆ ಚಿರತೆ ದಾಳಿ ನಡೆಸಿದೆ.

Advertisement

ಗಾಯಾಳುಗಳಿಗೆ ದೇವದುರ್ಗ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

Advertisement
Advertisement
Tags :
Advertisement