For the best experience, open
https://m.newskannada.com
on your mobile browser.
Advertisement

ಬ್ರಹ್ಮಾವರ: ಅಪರಿಚಿತ ಮಹಿಳೆಯರಿಂದ 1 ವರ್ಷದ ಮಗುವಿನ ಅಪಹರಣಕ್ಕೆ ಯತ್ನ

ಮನೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರಿಬ್ಬರು 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ.
02:37 PM Feb 23, 2024 IST | Gayathri SG
ಬ್ರಹ್ಮಾವರ  ಅಪರಿಚಿತ ಮಹಿಳೆಯರಿಂದ 1 ವರ್ಷದ ಮಗುವಿನ ಅಪಹರಣಕ್ಕೆ ಯತ್ನ

ಉಡುಪಿ: ಮನೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರಿಬ್ಬರು 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ನಡೆದಿದೆ.

Advertisement

ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ. ಬಳಿಕ ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ.

ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Advertisement