ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಸ್ಟ್ರೇಲಿಯ ತಂಡಕ್ಕೆ ಭಾರತದ ವಿರುದ್ಧ ರೋಚಕ ಜಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.
10:14 AM Nov 29, 2023 IST | Gayathri SG

ಗುವಾಹಟಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

Advertisement

ಈ ಪಂದ್ಯ  ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಿತು. ಭಾರತ ನೀಡಿದ 223 ರನ್‌ ಗಳ ಗುರಿ ಬೆನ್ನುಹತ್ತಿದ ಆಸ್ಟ್ರೇಲಿಯ ಉತ್ತಮ ಆರಂಭ ಪಡೆಯಿತು. ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ಟ್ರಾವೆಸ್‌ ಹೆಡ್‌ - ಆರೋನ್‌ ಹಾರ್ಡಿ ಜೋಡಿ ಭಾರತದ ಬೌಲರ್ಗ‌ಳ ಬೆವರಿಳಿಸಿದರು. ಆಸ್ಟ್ರೇಲಿಯ ತಂಡ 47 ರನ್‌ ಗಳಿಸಿದ್ದಾಗ ಆರೋನ್‌ ಹಾರ್ಡಿ ಅರ್ಶದೀಪ್‌ ಸಿಂಗ್‌ ಬೌಲಿಂಗ್‌ನಲ್ಲಿ ಇಶಾನ್‌ ಕಿಶನ್‌ ಗೆ ಕ್ಯಾಚಿತ್ತು ನಿರ್ಗಮಿಸಿದರು. ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಂದ ಜೋಸ್‌ ಇಂಗ್ಲಿಸ್‌ 10 ರನ್‌ ಗಳಿಸಿ ರವಿ ಬಿಷ್ಣೋಯಿಗೆ ವಿಕೆಟ್‌ ಒಪ್ಪಿಸಿದರು.

ಕ್ರೀಸ್‌ ಗೆ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಭಾರತ ತಂಡಕ್ಕೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. 48 ಎಸೆತ ಎದುರಿಸಿದ ಮ್ಯಾಕ್ಸ್‌ವೆಲ್‌ 8 ಬೌಂಡರಿ 8 ಸಿಕ್ಸರ್‌ ಗಳೊಂದಿಗೆ 104 ರನ್‌ ಗಳಿಸಿ ಅಜೇಯರಾಗಿ ಉಳಿದು ಆಸ್ಟ್ರೇಲಿಯ ತಂಡವನ್ನು ಗೆಲುವು ಸಾಧಿಸಿದರು.

Advertisement

Advertisement
Tags :
cricketindiaಆಸ್ಟ್ರೇಲಿಯಗುವಾಹಟಿ
Advertisement
Next Article