ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟೆಸ್ಟ್ ಸರಣಿ: ಟೀಂ ಇಂಡಿಯಾದಿಂದ ಹೊರಬಿದ್ದ ವೇಗದ ಬೌಲರ್ ಆವೇಶ್ ಖಾನ್

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಹೊರಗಿಡಲು ನಿರ್ಧರಿಸಲಾಗಿದೆ.
04:29 PM Jan 25, 2024 IST | Ashika S

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಹೊರಗಿಡಲು ನಿರ್ಧರಿಸಲಾಗಿದೆ.

Advertisement

ಈ ಹಿಂದೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದಾಗ ಆವೇಶ್ ಖಾನ್ ಕೂಡ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆಯಾಗಿದ್ದರು. ತಂಡದಿಂದ ಬಿಡುಗಡೆಯಾಗಿರುವ ಆವೇಶ್ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

ಹೈದರಾಬಾದ್ ಪಿಚ್‌ ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ತಂಡದಲ್ಲಿ ಮೂರನೇ ವೇಗದ ಬೌಲರ್ ಅನ್ನು ಆಡಿಸುವ ಅಗತ್ಯವಿಲ್ಲ ಎಂದು ಭಾವಿಸಿರುವ ಆಡಳಿತ ಮಂಡಳಿ ಆವೇಶ್​ ಖಾನ್​ರನ್ನು ತಂಡದಿಂದ ಹೊರಗಿಟ್ಟಿದೆ.

Advertisement

ಪಂದ್ಯ ಆರಂಭಕ್ಕೂ ಮುನ್ನ ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಮಾಹಿತಿ ನೀಡಿದೆ.

ಇನ್ನು ಮೊದಲ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ಭಾರತ ತಂಡ ಮೈದಾನಕ್ಕಿಳಿದಿದೆ. ಇನ್ನು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದ ಕಾರಣ, ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

Advertisement
Tags :
LatetsNewsNewsKannadaಆವೇಶ್ ಖಾನ್ಇಂಗ್ಲೆಂಡ್ಟೆಸ್ಟ್ ಸರಣಿಪಂದ್ಯಹೈದರಾಬಾದ್
Advertisement
Next Article