ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆರಿಗೆ ವೇಳೆ ಮೃತಪಟ್ಟ ಮಗು: ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಅಹೋ ರಾತ್ರಿ ಪ್ರತಿಭಟನೆ

ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ (ನ.20) ಹೆರಿಗೆ ವೇಳೆ ಮಗು ಮೃತಪಟ್ಟದ್ದು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಆಸ್ಪತ್ರೆ ಎದುರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು.
10:38 AM Nov 21, 2023 IST | Ramya Bolantoor

ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ (ನ.20) ಹೆರಿಗೆ ವೇಳೆ ಮಗು ಮೃತಪಟ್ಟದ್ದು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಆಸ್ಪತ್ರೆ ಎದುರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು.

Advertisement

 

Advertisement

ನ.17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗು ಮೃತಪಟ್ಟಿದೆ ಎಂದು ಮನೆಯವರು ಹಾಗೂ ಗ್ರಾಮಸ್ಥರು ಆರೋಪಿಸಿ, ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದ ಡಿಎಚ್ ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಅವರು ಪ್ರತಿಭಟನಾಕಾರರಲ್ಲಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರು. ಇನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿದರು.

Advertisement
Tags :
Baby dieschildbirthdeathLatestNewsNewsKannadaಕುಂದಾಪುರ
Advertisement
Next Article