For the best experience, open
https://m.newskannada.com
on your mobile browser.
Advertisement

ಈದ್ ಮಿಲಾದ್ ಹಬ್ಬಕ್ಕೆ ತೆರೆಗೆ ಬರ್ತಿದೆ 'ಬಡೆ ಮಿಯಾ ಚೋಟೆ ಮಿಯಾ'

ಇದೇ ತಿಂಗಳ‌ 11ರ ಈದ್ ಮಿಲಾದ್ ಹಬ್ಬಕ್ಕೆ ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್ ಜುಗಲ್ ಬಂದಿಯ ‘ಬಡೆ ಮಿಯಾನ್ ಚೋಟೆ ಮಿಯಾನ್’  ಸಿನಿಮಾದ  ತೆರೆಗೆ ಬರ್ತಿದೆ.
11:47 AM Apr 10, 2024 IST | Ashika S
ಈದ್  ಮಿಲಾದ್ ಹಬ್ಬಕ್ಕೆ ತೆರೆಗೆ ಬರ್ತಿದೆ  ಬಡೆ ಮಿಯಾ ಚೋಟೆ ಮಿಯಾ

ಮುಂಬೈ: ಇದೇ ತಿಂಗಳ‌ 11ರ ಈದ್ ಮಿಲಾದ್ ಹಬ್ಬಕ್ಕೆ ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್ ಜುಗಲ್ ಬಂದಿಯ ‘ಬಡೆ ಮಿಯಾ ಚೋಟೆ ಮಿಯಾ’  ಸಿನಿಮಾದ  ತೆರೆಗೆ ಬರ್ತಿದೆ.

Advertisement

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಾಯಕನಾಗಿ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್‌‌‌ ಖಳನಾಯಕನಾಗಿ ಅಭಿಯಸಿದ್ದಾರೆ. ನಾಯಕಿಯರಾಗಿ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದು,  ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ.

Advertisement

ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

Advertisement
Tags :
Advertisement