ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉದ್ಯೋಗ ಮೇಳ: ನಿರುದ್ಯೋಗ ಯುವಜನರಿಗೆ ಸಿಹಿಸುದ್ದಿ

ನಿರುದ್ಯೋಗ ಯುವಜನರಿಗೆ ಉದ್ಯೋಗ ಒದಗಿಸಿ ಕೊಡುವ ದೃಷ್ಟಿಯಿಂದ ಫೆಬ್ರವರಿ 26 ಮತ್ತು 27 ರಂದು ಅರಮನೆ ಮೈದಾನದಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ದೊಡ್ಡಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
03:07 PM Feb 22, 2024 IST | Ashitha S

ಬೆಂಗಳೂರು: ನಿರುದ್ಯೋಗ ಯುವಜನರಿಗೆ ಉದ್ಯೋಗ ಒದಗಿಸಿ ಕೊಡುವ ದೃಷ್ಟಿಯಿಂದ ಫೆಬ್ರವರಿ 26 ಮತ್ತು 27 ರಂದು ಅರಮನೆ ಮೈದಾನದಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ದೊಡ್ಡಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Advertisement

ಹಾಗೂ 500 ಕ್ಕೂ ಹೆಚ್ಚು ಕಂಪೆನಿ ಮತ್ತು ಸಂಸ್ಥೆಗಳು ಮೇಳದಲ್ಲಿ ಭಾಗವಹಿಸುತ್ತಿವೆ. ಈ ಮೇಳವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರ ಇದೀಗ ಉದ್ಯೋಗ ಇಲ್ಲದೆ ನಿರಾಸೆ ಹೊಂದಿರುವ ಯುವ ಜನತೆಗೆ ಒಂದು ಸುವರ್ಣವಕಾಶವನ್ನು ಒದಗಿಸಿಕೊಟ್ಟಿದೆ.

ಫೆಬ್ರವರಿ 26 ಮತ್ತು 27 ರಂದು 500ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುತ್ತಿದ್ದು ಪೂರ್ಣಗೊಳಿಸಿದ ಪದವಿ ಅಥವಾ ಎಂಜಿನಿಯರಿಂಗ್ ಡಿಪ್ಲೊಮಾ ಮತ್ತು ಇತರ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಹೊಂದಿರುವ ಯುವಕರಿಗೆ ಅವಕಾಶ ನೀಡುತ್ತಿದೆ.ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಮತ್ತು ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.

Advertisement

ರಾಜ್ಯದಾದ್ಯಂತ 31,000 ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಈಗಾಗಲೇ ಉದ್ಯೋಗ ಮೇಳಕ್ಕಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಜಾಗತಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಸುಮಾರು ಒಂದು ಲಕ್ಷ ಹುದ್ದೆಗಳಿದ್ದು, ಯುವಕರು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಹುಡುಕಲು ಇದು ಸರಿಯಾದ ವೇದಿಕೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರುತ್ತೇನೆ ಎಂದು ಪಾಟೀಲ್ ಹೇಳಿದರು.

ತಮ್ಮ ವಿದ್ಯಾರ್ಹತೆ ಮತ್ತು ಅವಶ್ಯಕತೆಗಳಿಗೆ ಸೂಕ್ತವಾದ ಉದ್ಯೋಗಾವಕಾಶಗಳನ್ನು ಹುಡುಕಲು ಸ್ಟಾಲ್‌ಗಳಿಗೆ ಭೇಟಿ ನೀಡಲು ಸಹಾಯ ಮಾಡಲು 600 ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು ಉದ್ಯೋಗ ಆಕಾಂಕ್ಷಿಗಳಿಗೆ ಸಹಾಯ ಮಾಹಿತಿ ನೀಡಲು ತಜ್ಞರು ಮತ್ತು ಕಂಪನಿಗಳ ಅಧಿಕಾರಿಗಳು ಇರುತ್ತಾರೆ ಎಂದು ಸಚಿವರು ಹೇಳಿದರು.  ಸಿಎಂ ಸಿದ್ದರಾಮಯ್ಯ ಅವರ ಈ ಉಪಕ್ರಮವನ್ನು ಶ್ಲಾಘಿಸಿದ ಪಾಟೀಲ್ ಅವರು,  ಬೇರೆ ಯಾವುದೆ ರಾಜ್ಯಗಳಲ್ಲಿ ಇಂತಹ ಉದ್ಯೋಗ ಆಯೋಜಿಸಿಲ್ಲ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧಿಕಾರಾವಧಿಯಲ್ಲಿ ಇದೇ ರೀತಿಯ ಉದ್ಯೋಗ ಮೇಳವನ್ನು ನಡೆಸಲಾಗಿತ್ತು. ಉದ್ಯೋಗ ಪಡೆಯಲು ಸಾಧ್ಯವಾಗದವರಿಗೆ ತರಬೇತಿ ನೀಡಲಾಗುವುದು. ಅದರ ಸಹಾಯದಿಂದ ಮುಂದಿನ ದಿನಗಳಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದ ಸಚಿವರು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಪಡೆದರೆ ನಮ್ಮ ಪ್ರಯತ್ನಕ್ಕೆ ಸಾರ್ಥಕತೆ ಸಿಕ್ಕಂತೆ ಎಂದರು.

ಇಂತಹ ಬೃಹತ್ ಉದ್ಯೋಗ ಮೇಳ ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ ಎಂದು ಪ್ರಿಯಾಂಕ್ ಖರ್ಗೆ ಹೆಮ್ಮೆಯಿಂದ ಹೇಳಿದ ಅವರು ಯುವಜನರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು. ಪ್ರಧಾನಿ ಮೋದಿ ಅವರು 20 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಎನ್‌ಎಸ್‌ಒ ಸಮೀಕ್ಷೆಯ ಪ್ರಕಾರ ನಾವು 40,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಕಳೆದುಕೊಂಡಿದ್ದೇವೆ ಮತ್ತು ಈ ವರದಿಯ ನಂತರ ಎನ್‌ಎಸ್‌ಒ ಸಮೀಕ್ಷೆಯನ್ನೇ ನಿಲ್ಲಿಸಲಾಯಿತು ಎಂದರು.

Advertisement
Tags :
BJPCongressGOVERNMENTindiajobKARNATAKALatestNewsLatetsNewsNewsKannadaಬೆಂಗಳೂರುಸಮ್ಮೇಳನಸಿದ್ದರಾಮಯ್ಯ
Advertisement
Next Article