ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಲ್ಪೆ: ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿ ಸಮುದ್ರಪಾಲು

ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಹೋದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
11:37 AM Jan 28, 2024 IST | Gayathri SG

ಉಡುಪಿ: ಪ್ರವಾಸಕ್ಕೆ ಬಂದಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಸಮುದ್ರದ ನೀರಿನಲ್ಲಿ ಕೊಚ್ಚಿಹೋದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

Advertisement

ನಾಪತ್ತೆಯಾದವರನ್ನು ಬೆಂಗಳೂರಿನ ಬ್ಯಾಂಕ್ ಉದ್ಯೋಗಿ ನಿತೀನ್ (35) ಎಂದು ಗುರುತಿಸಲಾಗಿದೆ. ಇವರು ರಜೆಯ ಹಿನ್ನೆಲೆಯಲ್ಲಿ ಜ.26ರಂದು ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದು, ವಾಪಸ್ ತೆರಳುವ ಸಂದರ್ಭದಲ್ಲಿ ಡೆಲ್ಟಾ ಬೀಚ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

ಅಲ್ಲಿ ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತೀನ್ ಅಲೆಗಳೊಂದಿಗೆ ಕೊಚ್ಚಿ ಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಹುಡುಕಾಟ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatestNewsMALPENewsKannadaಉಡುಪಿ
Advertisement
Next Article