ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯಾದಗಿರಿಯಲ್ಲಿ ಮತ್ತೆ ಶುರುವಾಯಿತು ನಿಷೇಧಿತ ಸ್ಯಾಟಲೈಟ್ ಕರೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
08:18 AM Dec 15, 2023 IST | Ashika S

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Advertisement

ಚೀನಾ ನಿರ್ಮಿತ ಸ್ಯಾಟ್‌ಲೈಟ್‌ ಫೋನಿಂದ ಪಾಕಿಸ್ತಾನಕ್ಕೆ ಈ ಕರೆ ಹೋಗಿರಬಹುದು ಎಂದು ಕೇಂದ್ರ ಸಂಸ್ಥೆಗಳು ಶಂಕಿಸಿವೆ.  ಸೆ.17ರಂದು ಶೆಳ್ಳಗಿ ಗ್ರಾಮದ ಕೃಷಿ ಪ್ರದೇಶವೊಂದರಿಂದ ಬೆಳಗ್ಗಿನ ಜಾವ 3 ಗಂಟೆಗೆ ಈ ಕರೆ ಮಾಡಲಾಗಿದೆ.

ಅನಾಮಧೇಯ ಸ್ಥಳಕ್ಕೆ ನಿಷೇಧಿತ ಸ್ಯಾಟಲೈಟ್ ಫೋನ್ ಉಪಕರಣದ ಮೂಲಕ ಕರೆ ಹೋಗಿರುವ ಜಾಡು ಅರಿತು ಕೇಂದ್ರ ಸಂಸ್ಥೆಗಳು ಮಾಹಿತಿ ರವಾನಿಸಿವೆ. ತಕ್ಷಣವೇ ಈ ಬಗ್ಗೆ ಜಾಗೃತರಾದ ಅಧಿಕಾರಿಗಳು ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ನಿಷೇಧಿತ ಸ್ಯಾಟ್ಲೈಟ್ ಫೋನ್ ಮೂಲಕ ವಿದೇಶಕ್ಕೆ ಕರೆ ಹೋಗಿರುವುದು  ಖಚಿತವಾಗಿದೆ. ಆದರೆ, ಇಂತಹುದ್ದೇ ಕಡೆಗೆ ಕರೆ ಹೋಗಿದೆ ಎಂದು ಖಚಿತವಾಗಿ ತಿಳಿದಿಲ್ಲವಾದರೂ, ಪಾಕಿಸ್ತಾನಕ್ಕೆ ಹೋಗಿರುವುದು ಶಂಕೆ ವ್ಯಕ್ತವಾಗಿದೆ.

Advertisement
Tags :
LatetsNewsNewsKannadaಕರೆನಿಷೇಧಿತಪ್ರಕರಣಯಾದಗಿರಿವಿದೇಶಸ್ಯಾಟಲೈಟ್
Advertisement
Next Article