For the best experience, open
https://m.newskannada.com
on your mobile browser.
Advertisement

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
08:40 AM May 17, 2024 IST | Ashitha S
ಎವರೆಸ್ಟ್​  ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

ನವದೆಹಲಿ: ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಈ ಎರಡು ನಿರ್ದಿಷ್ಟ ಬ್ರಾಂಡ್‌ಗಳ ಮಸಾಲೆಗಳಲ್ಲಿ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಮಹಾರ್ಜನ್ ಮತ್ತಷ್ಟು ಹೇಳಿದರು. ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಈಗಾಗಲೇ ಎಂಡಿಎಚ್ ಮತ್ತು ಎವರೆಸ್ಟ್‌ನ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದೆ.

ಇದು ಹಾಂಗ್ ಕಾಂಗ್ ಮತ್ತು ಸಿಂಗಾಪುರದ ಆಹಾರ ಸುರಕ್ಷತೆ ನಿಯಂತ್ರಕರಿಂದ ವಿವರಗಳನ್ನು ಕೇಳಿದೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ.

Advertisement

Advertisement
Tags :
Advertisement