ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ

ಇಲ್ಲಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಬಡವನಗುಡಿ ಕಡಲೆಕಾಯಿ ಪರಿಷೆಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಚಾಲನೆ ನೀಡಿದ್ದಾರೆ. ವಿಧಾನ ಪರಿಷತ್ ಜೆಡಿಎಸ್​​ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು.
02:34 PM Dec 11, 2023 IST | Ashitha S

ಬೆಂಗಳೂರು: ಇಲ್ಲಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಮೂಲಕ ಬಡವನಗುಡಿ ಕಡಲೆಕಾಯಿ ಪರಿಷೆಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಚಾಲನೆ ನೀಡಿದ್ದಾರೆ. ವಿಧಾನ ಪರಿಷತ್ ಜೆಡಿಎಸ್​​ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು.

Advertisement

ದೊಡ್ಡಗಣಪನಿಗೆ ವಿಶೇಷ 75 ಕೆಜಿ ಬೆಣ್ಣೆ ಅಲಂಕಾರ ಮಾಡಲಾಗಿದೆ. ನಿನ್ನೆ ಗಣಪನಿಗೆ ಸಾವಿರ ಕೆಜಿ ಕಡಲೆಕಾಯಿಯಿಂದ ಅಭಿಷೇಕ ಮಾಡಲಾಗಿತ್ತು. ಇಂದು ದೊಡ್ಡಬಸವನಿಗೆ 100 ಸೇರು ಕಡಲೆಕಾಯಿ ಅಭಿಷೇಕ ಮಾಡಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಪರಿಷೆ ನಡೆಯಲಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ’ ಎಂಬ ಆಹ್ವಾನದೊಂದಿಗೆ ಈ ಬಾರಿ ಪರಿಸರ ಸ್ನೇಹಿ ಪರಿಷೆ ನಡೆಸಲಾಗುತ್ತಿದೆ. 65 ವರ್ಷ ಮೇಲ್ಪಟ್ಟವರಿಗೆ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Advertisement

ಈ ಬಾರಿ ಒಟ್ಟು ನಾಲ್ಕೈ ದು ಕಡಲೆಕಾಯಿ ತಳಿಗಳು ಪರಿಷೆಯಲ್ಲಿ ವ್ಯಾಪಾರವಾಗ್ತಿದೆ. ನಾಟಿ, ಫಾರಂ, ಬೋಂಡಾ ಹಾಗೂ ಬಾದಾಮಿ ಎಂಬಿತ್ಯಾದಿ ಕಡಲೆಕಾಯಿಗಳು ಪರಿಷೆಯಲ್ಲಿ ಮಾರಾಟ ಆಗ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನ ಬರುವ ಹಿನ್ನೆಲೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

Advertisement
Tags :
GOVERNMENTindiaKARNATAKALatestNewsNewsKannadaಕಡಲೆಕಾಯಿನವದೆಹಲಿಬೆಂಗಳೂರು
Advertisement
Next Article