ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’: ರಾಜ್ಯ ಘೋಷಣೆ

ಕ್ರಾಂತಿಯೋಗಿ ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದೆ.
12:47 PM Jan 19, 2024 IST | Ramya Bolantoor

ಬೆಂಗಳೂರು: ಕ್ರಾಂತಿಯೋಗಿ ಬಸವಣ್ಣ ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ   ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಅವರಿಗೆ ಸಾಂಸ್ಕೃತಿಕ ಸ್ಥಾನಮಾನ ನೀಡುವ ಪ್ರಸ್ತಾವನೆಗೆ   ಒಪ್ಪಿಗೆ ನೀಡಲಾಗಿದೆ

Advertisement

ಮಹಾರಾಷ್ಟ್ರ ಸರ್ಕಾರ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಾಂಸ್ಕೃತಿಕ ನಾಯಕನೆಂದು ಅಧಿಕೃತ ಮುದ್ರೆಯೊತ್ತಿದೆ. ಇದೀಗ ಬಸವೇಶ್ವರರಿಗೆ ಸಾಂಸ್ಕೃತಿಕ ನಾಯಕನೆಂದು ಸಾರಿದ ಕರ್ನಾಟಕ ಎರಡನೇ ರಾಜ್ಯವಾಗಿದೆ.

ಸಬೆಯ ಬಳಿಕ ಸಚಿವ ಈಶ್ವರಖಂಡ್ರೆ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಮಠಾಧೀಶರು, ಸಮುದಾಯದ ಗಣ್ಯರು, ಸಚಿವ, ಶಾಸಕರು, ಬಸವೇಶ್ವರರ ವಿಚಾರಧಾರೆ ಬಲ್ಲವರು ಹಾಗೂ ಅನುಯಾಯಿಗಳ ಅಪೇಕ್ಷೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ ಎಂದು ಹೇಳಿದರು.

Advertisement

 

 

Advertisement
Tags :
GOVERNMENTKARNATAKALatestNewsNewsKannadaಬೆಂಗಳೂರು
Advertisement
Next Article