ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಧೋನಿಯ ನಂಬರ್-7 ಜೆರ್ಸಿಯನ್ನು ನಿವೃತ್ತಿಗೊಳಿಸಿದ ಬಿಸಿಸಿಐ

ಭಾರತ ತಂಡದ ಅತ್ಯಂತ  ಶ್ರೇಷ್ಠ ನಾಯಕ ಎಂಎಸ್ ಧೋನಿಯ ಜೆರ್ಸಿ ನಂಬರ್-7 ನ್ನು ನಿವೃತ್ತಿಗೊಳಿಸಲು ಬಿಸಿಸಿಐ ನಿರ್ಧರಿಸಿದೆ.
11:18 AM Dec 15, 2023 IST | Ashika S

ಮುಂಬೈ:  ಭಾರತ ತಂಡದ ಅತ್ಯಂತ  ಶ್ರೇಷ್ಠ ನಾಯಕ ಎಂಎಸ್ ಧೋನಿಯ ಜೆರ್ಸಿ ನಂಬರ್-7ಅನ್ನು ನಿವೃತ್ತಿಗೊಳಿಸಲು ಬಿಸಿಸಿಐ ನಿರ್ಧರಿಸಿದೆ.

Advertisement

ಧೋನಿ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಮಾತ್ರ ಆಡುತ್ತಿದ್ದಾರೆ.  ಇದೀಗ ಧೋನಿ ನಿವೃತ್ತಿಯಾದ ಮೂರು ವರ್ಷಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಬಿಸಿಸಿಐ ಆಟಗಾರರೊಬ್ಬರ ಜರ್ಸಿಯನ್ನು ನಿವೃತ್ತಿಗೊಳಿಸಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಭಾರತದ ಶ್ರೇಷ್ಠ ಬ್ಯಾಟರ್ ಸಚಿನ್ ತೆಂಡೂಲ್ಕರ್ ಜೆರ್ಸಿ ನಂಬರ್ 10ನ್ನು ಕೂಡ ಬಿಸಿಸಿಐ ನಿವೃತ್ತಿಗೊಳಿಸಿದೆ.

Advertisement

ಕ್ರಿಕೆಟ್ ಲೋಕದಲ್ಲಿ ಧೋನಿ ಜೊತೆಗೆ ಅವರ ಜೆರ್ಸಿ ಸಂಖ್ಯೆ 7 ಕೂಡ ಅಷ್ಟೇ ಹೆಸರುವಾಸಿಯಾಗಿದೆ.

ಇನ್ನುಮುಂದೆ ಟೀಮ್ ಇಂಡಿಯಾದಲ್ಲಿರುವಾಗ ಆಟಗಾರರು ನಂಬರ್-7 ಜರ್ಸಿಯನ್ನು ಧರಿಸುವಂತಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ಹೇಳಿದೆ.

Advertisement
Tags :
LatetsNewsNewsKannadaಜೆರ್ಸಿ ನಂಬರ್ಧೋನಿಬಿಸಿಸಿಐಭಾರತ
Advertisement
Next Article