ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2ಗೆ ವಿಶ್ವದ ಸುಂದರ ವಿಮಾನ ನಿಲ್ದಾಣದ ಗರಿ

ಉದ್ಯಾನ ನಗರಿ ಬೆಂಗಳೂರಿಗೆ ಮತ್ತೊಂದು ಗರಿ ದೊರೆತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಗೌರವಕ್ಕೆ ಪಾತ್ರವಾಗಿದೆ.
08:16 AM Dec 22, 2023 IST | Ashika S

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿಗೆ ಮತ್ತೊಂದು ಗರಿ ದೊರೆತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಗೌರವಕ್ಕೆ ಪಾತ್ರವಾಗಿದೆ.

Advertisement

ಈ ಮೂಲಕ ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೋದ ಪ್ರತಿಷ್ಠಿತ ವಾಸ್ತುಶಿಲ್ಪ ಸ್ಪರ್ಧೆಯ ಪ್ರಿಕ್ಸ್ ವರ್ಸೈ ಗೌರವಕ್ಕೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. ಟಿ2ನಲ್ಲಿರುವ ಒಳಾಂಗಣ ವಿನ್ಯಾಸಕ್ಕಾಗಿ ಈ ವರ್ಷದ ಗೌರವ ಸಿಕ್ಕಿದೆ. ಅಷ್ಟೇ ಅಲ್ಲದೇ ಈ ಗೌರವಕ್ಕೆ ಪಾತ್ರವಾದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯೂ ಈಗ ಕೆಐಎಎಲ್‌ಗೆ ಸಿಕ್ಕಿದೆ.

ಪ್ಯಾರಿಸ್‌ ಮೂಲದ ಪ್ರಿಕ್ಸ್ ವರ್ಸೈಲ್ಸ್ 2015 ರಲ್ಲಿ ಸ್ಥಾಪಿಸಲಾಗಿದ್ದು ವಿಮಾನ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು, ಕ್ಯಾಂಪಸ್‌ಗಳು ಮತ್ತು ಪ್ರಯಾಣಿಕರ ನಿಲ್ದಾಣಗಳು ಸೇರಿದಂತೆ ಹಲವಾರು ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತದೆ. ಅಮೆರಿಕದ ವಾಸ್ತುಶಿಲ್ಪ ಸಂಸ್ಥೆ ಸ್ಕಿಡ್‌ಮೋರ್, ಓವಿಂಗ್ಸ್ & ಮೆರಿಲ್ ಕಂಪನಿ ಟರ್ಮಿನಲ್‌ ವಿನ್ಯಾಸ ಮಾಡಿದೆ. ಏಕಕಾಲದಲ್ಲಿ 6 ಸಾವಿರ ಮಂದಿಗೆ ಕುಳಿತುಕೊಳ್ಳುವ ವ್ಯವಸ್ಥೆ ಇಲ್ಲಿ ಇರುವುದು ವಿಶೇಷ.

Advertisement

Advertisement
Tags :
LatetsNewsNewsKannadaಅಂತಾರಾಷ್ಟ್ರೀಯ ವಿಮಾನ ನಿಲ್ದಾಣಉದ್ಯಾನ ನಗರಿಟರ್ಮಿನಲ್ 2ಸುಂದರ ವಿಮಾನ ನಿಲ್ದಾಣ
Advertisement
Next Article