ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಐವರು ಶಂಕಿತ ಉಗ್ರರ ಬಂಧನ ಪ್ರಕರಣ ಎನ್​ಐಎಗೆ ವರ್ಗಾಯಿಸಿದ ಸಿಸಿಬಿ

ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ ರಾಷ್ಟ್ರೀಯ ತನಿಖಾ ದಳಗೆ ವರ್ಗಾವಣೆ ಮಾಡಿದೆ.
09:53 AM Nov 02, 2023 IST | Ramya Bolantoor

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ ರಾಷ್ಟ್ರೀಯ ತನಿಖಾ ದಳಗೆ ವರ್ಗಾವಣೆ ಮಾಡಿದೆ. ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು. ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ.

Advertisement

ಇನ್ನು ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಐವರು ಶಂಕಿತ ಉಗ್ರರು ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಶಂಕಿತ ಉಗ್ರ ನಾಸೀರ್​ ಜೈಲಿನಲ್ಲಿದ್ದುಕೊಂಡೆ ಈ ಐವರು ಶಂಕಿತ ಉಗ್ರರ ಬ್ರೈನ್ ವಾಶ್ ಮಾಡಿದ್ದನು. ಈ ಎಲ್ಲ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

Advertisement
Advertisement
Tags :
CASECCBKARNATAKALatestNewsLatetsNewsNewsKannadaNIAಬೆಂಗಳೂರು
Advertisement
Next Article