ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣ : ದಂಪತಿ ಸಹಿತ ನಾಲ್ವರ ಬಂಧನ

ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.
10:20 AM Dec 16, 2023 IST | Ramya Bolantoor

ಬೆಂಗಳೂರು: ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ಯ್ರಾಪ್ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಮಾಡಿತ್ತು.

ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ‌ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ.

Advertisement

ಆರ್​ಅರ್​ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸೀನ್ ಕ್ರಿಯೇಟ್ ಮಾಡಿದ್ದ ಆರೋಪಿಗಳು, ಆರು ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದರೆ ಈ ವಿಚಾರ ನಿಮ್ಮ ಮನೆಯವರಿಗೆ ಹೇಳುತ್ತೇವೆ ಅಂತ ಬೆದರಿಕೆ ಹಾಕಿದ್ದಾರೆ.

ಮಾಹಿತಿ ತಿಳಿದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisement
Tags :
ARRESTcrimeKARNATAKALatestNewsNewsKannadaPOLICEಬೆಂಗಳೂರು
Advertisement
Next Article