ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಅತೀ ಹೆಚ್ಚು ಆ್ಯಸಿಡ್ ದಾಳಿ: ದೇಶಕ್ಕೆ ಅಗ್ರಸ್ಥಾನ

ದೇಶದಲ್ಲಿ ಮಹಿಳೆಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಗಳಲ್ಲಿ ಅತಿ ಹೆಚ್ಚು ದಾಳಿ ನಡೆದಿರುವುದು ಬೆಂಗಳೂರಿನಲ್ಲಿ ಎಂಬ ಮಾಹಿತಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಎನ್‌ಸಿಆರ್‌ಬಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.
05:18 PM Dec 10, 2023 IST | Ashitha S

ಬೆಂಗಳೂರು: ದೇಶದಲ್ಲಿ ಮಹಿಳೆಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಗಳಲ್ಲಿ ಅತಿ ಹೆಚ್ಚು ದಾಳಿ ನಡೆದಿರುವುದು ಬೆಂಗಳೂರಿನಲ್ಲಿ ಎಂಬ ಮಾಹಿತಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ. 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಎನ್‌ಸಿಆರ್‌ಬಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.

Advertisement

ಅಂಕಿಅಂಶಗಳ ಪ್ರಕಾರ, ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಒಳಗಾಗುವುದರೊಂದಿಗೆ ಬೆಂಗಳೂರು ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2022 ರಲ್ಲಿ ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾದ ದೆಹಲಿ ಎರಡನೇ ಸ್ಥಾನದಲ್ಲಿದೆ ಮತ್ತು ಐದು ಪ್ರಕರಣಗಳು ದಾಖಲಾಗಿರುವ ಅಹಮದಾಬಾದ್ ಮೂರನೇ ಸ್ಥಾನದಲ್ಲಿ ಇದೆ ಎಂದು ಅಂಕಿಅಂಶಗಳು ತಿಳಿಸಿವೆ. ಎನ್‌ಸಿಆರ್‌ಬಿ ದತ್ತಾಂಶದ ವಿಶ್ಲೇಷಣೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ಆಸಿಡ್ ದಾಳಿ ಯತ್ನ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಬೆಂಗಳೂರಿನಲ್ಲಿ ಕಳೆದ ವರ್ಷ ಅಂತಹ ಮೂರು ಪ್ರಕರಣಗಳು ದಾಖಲಾಗಿವೆ ಎಂದು ತೋರಿಸಿದೆ.

Advertisement

 

Advertisement
Tags :
acid-attacksBANGALOREcrimeindiaKARNATAKALatestNewsNCRBNewsKannadaPOLICEಆ್ಯಸಿಡ್ ದಾಳಿನವದೆಹಲಿಬೆಂಗಳೂರು
Advertisement
Next Article