ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಲ್ಪಕಾಲದ ಅಸೌಖ್ಯದಿಂದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟು ಯಕ್ಷಗಾನದ ಕಂಚಿನ ಕಂಠದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತ್ಯಜಿಸಿದ್ದಾರೆ.
09:56 AM Apr 25, 2024 IST | Ashika S

ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ ಕಂಚಿನ ಕಂಠದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತ್ಯಜಿಸಿದ್ದಾರೆ.

Advertisement

ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.

ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

Advertisement

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Advertisement
Tags :
BhagavataLatetsNewsNewsKarnatakaSubramanya Dhareshwara
Advertisement
Next Article