For the best experience, open
https://m.newskannada.com
on your mobile browser.
Advertisement

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್​

 ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸ್ ಅನ್ನು​ ರದ್ದು ಮಾಡಲಾಗಿದೆ.
01:40 PM Mar 05, 2024 IST | Ashitha S
ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್​

ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸ್ ಅನ್ನು​ ರದ್ದು ಮಾಡಲಾಗಿದೆ.

Advertisement

2018ರಲ್ಲಿ ಜಾರಿ ನಿರ್ದೇಶನಾಲಯ  ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿರದ ಕಾರಣ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪಿತೂರಿ ಆರೋಪ ಹೊರಿಸಿತ್ತು. ಪಿಎಂಎಲ್ ಕಾಯಿದೆಯ ಅಡಿ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸೂರ್ಯಕಾಂತ್ ನೇತೃತ್ವದ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. PML ಕಾಯಿದೆಯ ಅಡಿಯ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

Advertisement

Advertisement
Tags :
Advertisement