ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರ ಮೃತ್ಯು

ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಇಂದು ಬೆಳಿಗ್ಗೆ ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.
03:08 PM Feb 26, 2024 IST | Ashika S

ಉಡುಪಿ: ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಇಂದು ಬೆಳಿಗ್ಗೆ ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.

Advertisement

ಮೃತರನ್ನು ಬೈಂದೂರು ಸಮೀಪದ ನಾಗೂರು ಮೂಲದ, ಪ್ರಸ್ತುತ ಕುಂದಾಪುರದ ನಿವಾಸಿ ಮೊಹಮ್ಮದ್ ಫರ್ವೇಜ್(37) ಎಂದು ಗುರುತಿಸಲಾಗಿದೆ. ಇವರು ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatestNewsNewsKannadaಡಿಕ್ಕಿಡಿವೈಡರ್ಹೇರಿಕುದ್ರು
Advertisement
Next Article