ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್‌, ಮಿನಿಗೂಡ್ಸ್ ಮುಖಾಮುಖಿ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.
12:54 PM Mar 05, 2024 IST | Nisarga K
ಬೈಕ್‌, ಮಿನಿಗೂಡ್ಸ್ ನಡುವೆ ಮುಖಾಮುಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಪುತ್ತೂರು:  ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.

Advertisement

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್(ಜೀತ್‌) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.

Advertisement

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ , ತಾಯಿ, ಸಹೋದರರಾದ ಸುನೀಶ್‌ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.

Advertisement
Tags :
ACCIDENTBIKEcollegedeathLatestNewsMiniGoodsNewsKannadaPUTTURRAMAKUNJASTUDENT
Advertisement
Next Article