For the best experience, open
https://m.newskannada.com
on your mobile browser.
Advertisement

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.
05:41 PM May 16, 2024 IST | Chaitra Kulal
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ  ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ಡಾ. ಸರ್ಜಿ ಅವರು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಬಿಜೆಪಿ ಹಿರಿಯ ಮುಖಂಡರಾದ ಎನ್.ಜೆ.ರಾಜಶೇಖರ್ ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು. ‌

Advertisement

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ (ಚನ್ನಗಿರಿ, ನ್ಯಾಮತಿ, ಹೊನ್ನಾಳಿ) ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Tags :
Advertisement