ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.
07:13 PM Mar 22, 2024 IST | Ashika S

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.

Advertisement

ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್‌ ಬಂಧನ ವಿಚಾರವಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾರನ್ನು ಉದ್ದೇಶಿಸಿ ಚೋರ್​ ಗುರು ಚಾಂಡಲ್​ ಶಿಷ್ಯ ಎಂದು ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದರು. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಐಟಿ/ಇಡಿ ದಾಳಿಗಳು ಮತ್ತು ವಿರೋಧ ಪಕ್ಷದ ನಾಯಕರ ಬಂಧನವು ನೈಜ ಸಮಸ್ಯೆಗಳಿಂದ ಸಾರ್ವಜನಿಕರನ್ನು ಬೇರೆಡೆಗೆ ಸೆಳೆಯಲು ಬಿಜೆಪಿಯ ಪ್ರಮಾಣಿಕ ಕಾರ್ಯ ವಿಧಾನವಾಗಿದೆ. ಚೋರ್ ಗುರು ಮತ್ತು ಚಂಡಾಲ್ ಶಿಷ್ಯರಿಂದ ಆದೇಶಕ್ಕಾಗಿ ಕಾಯುತ್ತಿರುವ ಜಾರಿ ಸಂಸ್ಥೆಗಳು ಇಷ್ಟು ದಿನ ಏನು ಮಾಡುತ್ತಿದ್ದವು ಎಂದು ಪ್ರಶ್ನಿಸಿ ಸಚಿವ ಪ್ರಿಯಾಂಕ್ ಖರ್ಗೆ  ಟ್ವೀಟ್ ಮಾಡಿದ್ದರು.

Advertisement

ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ವಿಚಾರವಾಗಿ ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಪ್ರಿಯಾಂಕ್ ಖರ್ಗೆ ಮನೆ‌ಗೆ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.

Advertisement
Tags :
bengaluruCOMPLAINTLatetsNewsNewsKarnataka
Advertisement
Next Article