ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡದ್ದೆ ಹಲ್ಲೆಗೆ ಕಾರಣ

ಊಟ ಪಾರ್ಸಲ್ ತೆಗೆದುಕೊಳ್ಳಲು  ಹೊಟೇಲ್​ಗೆ ಬಂದಿದ್ದ ವೇಳೆ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಿನ್ನೆ (ಡಿ.10) ರಾತ್ರಿ ನಡೆದಿದೆ.
07:08 AM Dec 11, 2023 IST | Ashika S

ಶಿವಮೊಗ್ಗ: ಊಟ ಪಾರ್ಸಲ್ ತೆಗೆದುಕೊಳ್ಳಲು  ಹೊಟೇಲ್​ಗೆ ಬಂದಿದ್ದ ವೇಳೆ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಿನ್ನೆ (ಡಿ.10) ರಾತ್ರಿ ನಡೆದಿದೆ.

Advertisement

ಗೋಕುಲ್ ಕೃಷ್ಣನ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಊಟ ಪಾರ್ಸಲ್ ತೆಗೆದುಕೊಳ್ಳಲು ಗೋಕುಲ್ ಅವರು ಭದ್ರಾವತಿಯ ಬಿ.ಹೆಚ್.ರಸ್ತೆಯ ಕಾಂಚನ್ ಹೋಟೆಲ್​ಗೆ ಹೋಗಿದ್ದರು. ಈ ವೇಳೆ ಹೊಟೇಲ್​ಗೆ ನುಗ್ಗಿದ  6-7 ದುಷ್ಕರ್ಮಿಗಳು  ದೊಣ್ಣೆಯಿಂದ ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ ನಡೆಸಿದ್ದಾರೆ.

Advertisement

ಹಲ್ಲೆಯಿಂದ ಗೋಕುಲ್ ಕೃಷ್ಣನ್  ಹಣೆ ಮತ್ತು ಕಿವಿಗೆ ಬಲವಾಗಿ ಹೊಡೆತ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದು ಕೂಡಲೇ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋಕುಲ್ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ವಿರುದ್ಧ ಅಕ್ರಮ ದಂಧೆ ಕುರಿತು ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಪೋಸ್ಟ್ ಮಾಡಿದ ಬಳಿಕ ನಿನ್ನೆ ಕಾರು ಜಖಂಗೊಳಿಸಿದ್ದ ದುಷ್ಕರ್ಮಿಗಳ ರಾತ್ರಿ ವೇಳೆ ಬಿಜೆಪಿ ಮುಖಂಡ ಗೋಕುಲ್​ಗೆ ಹಲ್ಲೆ ನಡೆಸಿದ್ದಾರೆ.

ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದೆ ಹಲ್ಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಘಟನೆಯನ್ನು ಶಿವಮೊಗ್ಗ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಂಡಿಸಿದ್ದಾರೆ.

Advertisement
Tags :
LatetsNewsNewsKannadaಊಟ ಪಾರ್ಸಲ್ಬಿಜೆಪಿಮುಖಂಡಹಲ್ಲೆ
Advertisement
Next Article