ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಲ್​ಕೆ ಅಡ್ವಾಣಿಗೆ  ಭಾರತ ರತ್ನ: ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಹರ್ಷ

ಬಿಜೆಪಿಯ ಎಲ್​ಕೆ ಅಡ್ವಾಣಿಗೆ  ಭಾರತ ರತ್ನ  ಘೋಷಣೆಯಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಕರ್ಣಾಟಕದ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
01:25 PM Feb 03, 2024 IST | Ashika S

ಬೆಂಗಳೂರು: ಬಿಜೆಪಿಯ ಎಲ್​ಕೆ ಅಡ್ವಾಣಿಗೆ  ಭಾರತ ರತ್ನ  ಘೋಷಣೆಯಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಕರ್ಣಾಟಕದ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

‘ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು. ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು’ ಎಂದು ಯಡಿಯೂರಪ್ಪ ಸಾಮಾಜಿಕ ಮಾಧ್ಯಮ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

‘ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ. ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನೂ ಸುದೀರ್ಘ ಕಾಲ ಆ ದೇವರು ಅವರಿಗೆ ಉತ್ತಮ ಆರೋಗ್ಯದೊಂದಿಗೆ ನಮಗೆ ಪ್ರೇರಣೆ ನೀಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೋರುತ್ತೇನೆ’ ಎಂಬುದಾಗಿ ಯಡಿಯೂರಪ್ಪ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

ಈ ಕುರಿತು ಸಂತಸ ವ್ಯಕ್ತಪಡಿಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ 'ಒಬ್ಬ ಮಹಾನ್​ ವ್ಯಕ್ತಿಗೆ ಭಾರತ ರತ್ನ ಸಿಕ್ಕಿದ್ದು ಸಂತಸದ ವಿಚಾರ. ಅಡ್ವಾಣಿಗೆ ಭಾರತ ರತ್ನ ಸಿಕ್ಕಿದ್ದು ನಮಗೇ ಸಿಕ್ಕಂತಾಗಿದೆ. ನಮಗೆ ಒಂಥರಾ ರೋಮಾಂಚನ ಆಗುತ್ತಿದೆ. ರಾಜ್ಯಕ್ಕೆ ಎಲ್​.ಕೆ.ಅಡ್ವಾಣಿ ಅವರ ಕೊಡುಗೆ ಅಪಾರ  ಎಂದು ಅಶೋಕ್ ತಿಳಿಸಿದ್ದಾರೆ.

ಅಡ್ವಾಣಿಗೆ ಹೆಚ್​ಡಿ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದು, ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ದಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಎಲ್​​ಕೆ ಅಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೆ ಅಭಿವಂದನೆಗಳು.

ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಅಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂಬುದಾಗಿ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement
Tags :
LatetsNewsNewsKannadaಎಲ್​ಕೆ ಅಡ್ವಾಣಿಬಿಎಸ್ ಯಡಿಯೂರಪ್ಪಬಿಜೆಪಿಭಾರತ ರತ್ನಹರ್ಷ
Advertisement
Next Article