ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ಬಿವೈ ವಿಜಯೇಂದ್ರ ಆಕ್ರೋಶ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ಹೊಟೇಲ್​ಗೆ ಊಟ ಪಾರ್ಸಲ್ ತೆಗೆದುಕೊಳ್ಳಲು  ಹೋಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಸಂಬಂಧ ಎಕ್ಸ್​ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.
01:36 PM Dec 11, 2023 IST | Ashika S

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ಹೊಟೇಲ್​ಗೆ ಊಟ ಪಾರ್ಸಲ್ ತೆಗೆದುಕೊಳ್ಳಲು  ಹೋಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಸಂಬಂಧ ಎಕ್ಸ್​ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು  ಗುರಿಯಾಗಿಸಿಕೊಂಡು ಹಲ್ಲೆ ಮಾಡಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

Advertisement

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

Advertisement
Tags :
LatetsNewsNewsKannadaಆಕ್ರೋಶಊಟಕಾರ್ಯಕರ್ತದುಷ್ಕರ್ಮಿಪಾರ್ಸಲ್ಬಿಜೆಪಿಹೊಟೇಲ್
Advertisement
Next Article