ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಆಲೂಗಡ್ಡೆ (ಬಟಾಟೆ) ನೀಡಿದ್ದಾರೆ.
08:28 PM Mar 05, 2024 IST | Ashitha S

ಭೋಪಾಲ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್, ಮೋದಿ ಮೋದಿ ಘೋಷಣೆಗಳನ್ನು ಕೂಗುವುದನ್ನು ನೋಡಿರುತ್ತೀರಿ. ಹೀಗೆ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆ ರಾಹುಲ್ ಗಾಂಧಿ ಹಸ್ತಲಾಘವ ಮಾಡಿದ್ದರು. ಆದರೆ, ಈ ಬಾರಿ ಶೇಕ್ ಹ್ಯಾಂಡ್ ಕೊಡಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಆಲೂಗಡ್ಡೆ (ಬಟಾಟೆ) ನೀಡಿದ್ದಾರೆ.

Advertisement

ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತೆರೆದ ವಾಹನದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ಕೂಡಲೇ ವಾಹನವನ್ನು ನಿಲ್ಲಿಸುವಂತೆ ಹೇಳಿದ ರಾಹುಲ್ ಗಾಂಧಿ, ವಾಹನದಿಂದ ಇಳಿದು ನೇರವಾಗಿ ಬಿಜೆಪಿ ಕಾರ್ಯಕರ್ತರಿದ್ದಲ್ಲಿಗೆ ಹೋಗಿ ಹಸ್ತಲಾಘವ ಮಾಡಿದರು. ಈ ವೇಳೆ ಕೆಲವು ಕಾರ್ಯಕರ್ತರು ರಾಹುಲ್ ಗೆ ಚಿನ್ನ ತಯಾರಿಸಲು ಆಲೂಗಡ್ಡೆಯನ್ನು ನೀಡಿದರು.

ರಾಹುಲ್ ಗಾಂಧಿ ಅವರು 2017 ರಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಗುಜರಾತ್ ಭಾಷಣ ಮಾಡಿದ ರಾಹುಲ್ ಗಾಂಧಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋದಲ್ಲಿ, “ಮೆಷೀನ್​ನ ಈ ಕಡೆಯಿಂದ ಆಲೂಗಡ್ಡೆ ಹಾಕಿದರೆ ಆಕಡೆಯಿಂದ ಚಿನ್ನ ಬರುತ್ತದೆ” ಎಂದು ಹೇಳಿರುವುದು ಸಾಕಷ್ಟು ಸದ್ದು ಮಾಡಿತ್ತು. ಅದರ ಪ್ರತಿಯಾಗಿ ಇಂದು ಬಿಜೆಪಿ ಕಾರ್ಯರ್ತರು ಹೀಗೆ ಆಲೂಗಡ್ಡೆ ನೀಡಿರ ಬಹುದು ಎಂದು ಊಹಿಸಲಾಗ್ತಿದೆ.

Advertisement

 

 

Advertisement
Tags :
BJPCongressGOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿ
Advertisement
Next Article