For the best experience, open
https://m.newskannada.com
on your mobile browser.
Advertisement

ಬಿಜೆಪಿ ತಿರಂಗ ಯಾತ್ರೆ: ಟೌನ್​ಹಾಲ್ ಬಳಿ ನಡೆಯಿತು ಹೈಡ್ರಾಮ

ಭಯೋತ್ಪಾದನಾ ಚಟುವಟಿಕೆ ವಿರುದ್ಧ ಬೆಂಗಳೂರಿನ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬಿಜೆಪಿ ಯುವ ಮೋರ್ಚಾದಿಂದ ತಿರಂಗ ಯಾತ್ರೆಗೆ ಸಿದ್ಧತೆ ನಡೆಸಲಾಗಿತ್ತು.
05:56 PM Mar 04, 2024 IST | Ashika S
ಬಿಜೆಪಿ ತಿರಂಗ ಯಾತ್ರೆ  ಟೌನ್​ಹಾಲ್ ಬಳಿ ನಡೆಯಿತು ಹೈಡ್ರಾಮ

ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ವಿರುದ್ಧ ಬೆಂಗಳೂರಿನ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬಿಜೆಪಿ ಯುವ ಮೋರ್ಚಾದಿಂದ ತಿರಂಗ ಯಾತ್ರೆಗೆ ಸಿದ್ಧತೆ ನಡೆಸಲಾಗಿತ್ತು.

Advertisement

ಮುಂಜಾಗ್ರತಾ ಕ್ರಮವಾಗಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್​ನಲ್ಲಿ ಇರಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಮುಖಂಡರು ಪ್ರತಿಭಟನೆಗೆ ಇಳಿದರು.

ಇದನ್ನು ತಡೆದ ಪೊಲೀಸರೊಂದಿಗೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಾಗ್ವಾದಕ್ಕಿಳಿದರು.  ಟೌನ್​ಹಾಲ್ ಬಳಿ ಹೈಡ್ರಾಮವೇ ನಡೆಯಿತು.

Advertisement

ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಕಾರ್ಯಕರ್ತರನ್ನು ಪೊಲೀಸರು ಬಿಡುಗಡೆ ಮಾಡಿದರು.

ತರ ಕೆಲವು ಹೊತ್ತು ಟೌನ್ ಹಾಲ್ ಮುಂದೆ ಘೋಷಣೆ ಕೂಗಿದ ಯುವ ಮೋರ್ಚಾ ಕಾರ್ಯಕರ್ತರು ವಾಪಸ್ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡೊಯ್ದರು.

ತಿರಂಗ ಯಾತ್ರೆಯನ್ನು ಪೊಲೀಸರು ತಡೆದಿದ್ದಲ್ಲದೆ, ಬಿಜೆಪಿ ಕಾರ್ಯಕರ್ತರು ತಂದಿದ್ದ ರಾಷ್ಟ್ರಧ್ವಜಗಳನ್ನು ಬಲವಂತವಾಗಿ ವಶಕ್ಕೆ ಪಡೆದು ಜೀಪ್​ನಲ್ಲಿ ಹಾಕಿ ಕೊಂಡೊಯ್ದರು. ಈ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಳ್ಳಾಡಿದರು.

ಈ ವೇಳೆ ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಪೊಲೀಸರ ಜೊತೆ ಜಗಳಕ್ಕೆ ನಿಂತರು.

ಅನುಮತಿ ಪಡೆದಿಲ್ಲ ಎಂದು ಬಿಜೆಪಿ ತಿರಂಗಾ ಯಾತ್ರೆಗೆ ಅನುಮತಿ ನಿರಾಕರಿಸಿ ರಾಷ್ಟ್ರಧ್ವಜವನ್ನು ಬಲವಂತವಾಗಿ ಪೊಲೀಸ್ ಜೀಪ್​ನಲ್ಲಿ ಮೂಟೆ ಕಟ್ಟಿದ ರೀತಿಯಲ್ಲಿ ತುಂಬಿ ಕೊಂಡೊಯ್ಯಲಾಗಿದೆ. ಭಾರತ ಮಾತೆಯ ಮಕ್ಕಳಾಗಿ ರಾಷ್ಟ್ರಧ್ವಜ ಹಿಡಿದು ಮೌನ ಪ್ರತಿಭಟನೆಗೆ ಅನುಮತಿ ಯಾಕೆ ಪಡೆಯಬೇಕು ಎಂದು ಬಿಜೆಪಿ ಕಾರ್ಯಕರ್ತರ ಆಕ್ರೋಶ ಹೊರಹಾಕಿದರು.

Advertisement
Tags :
Advertisement